ಕೂಡಿಗೆ, ಜು. ೨೦: ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿರಂಗಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ರೂ. ೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿ ರುವ ಉದ್ಯಾನವನ ಕಾಮಗಾರಿಗೆ ಭೂಮಿಪೂಜೆಯನ್ನು ಗ್ರಾ. ಪಂ.ಅಧ್ಯಕ್ಷೆ ಭಾಗೀರತಿ ನೆರವೇರಿಸಿದರು. ನಂತರ ಮಾತನಾಡಿದ ಭಾಗೀರತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾ.ಪಂ. ವತಿಯಿಂದ ಸುಂದರ ಉದ್ಯಾನವನ ನಿರ್ಮಾಣದ ಮೂಲಕ ಕೈತೋಟ ಯೋಜನೆ ಯನ್ನು ಕೈಗೊಳ್ಳಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಮಾತನಾಡಿ, ಗ್ರಾ.ಪಂ. ವತಿಯಿಂದ ಸ್ಥಳೀಯ ಶಾಲೆ, ಕಾಲೇಜು, ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹಾಲಕ್ಷಿö್ಮ, ಸದಸ್ಯರುಗಳಾದ ಶ್ರೀಕಾಂತ್, ಪ್ರತಾಪ್, ಬಸವರಾಜ್, ಸರಿತ, ಲತಾಬಾಯಿ, ಗೀತಾ, ಲಕ್ಷö್ಮಮ್ಮ, ಆರೋಗ್ಯ ಸಹಾಯಕರಾದ ಸಂಜಯ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.