ಸೋಮವಾರಪೇಟೆ, ಜು. ೨೧: ಬಿಜೆಪಿ ಎಸ್.ಸಿ. ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ಮಂಡಲ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ಕುಮಾರ್, ಪ್ರಮುಖರಾದ ಜಗನ್ನಾಥ್, ಎಸ್.ಆರ್. ಸೋಮೇಶ್, ವೈದ್ಯ ಶಿವಪ್ರಸಾದ್ ಅವರುಗಳು ಈ ಸಂದರ್ಭ ಉಪಸ್ಥಿತರಿದ್ದರು.