ಕೂಡಿಗೆ, ಜು. ೨೧: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಕೂಡಿಗೆಯ ರಾಮಲಿಂಗೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಸಭಾಂಗಣದಲ್ಲಿ ವಿತರಿಸಲಾಯಿತು.
ನಂತರ ಮಾತನಾಡಿದ ಕೊರೊನಾ ಹಿನ್ನೆಲೆ ಕಾರ್ಮಿಕ ಸಚಿವರ ಪ್ರಯತ್ನದಲ್ಲಿ ಕಾರ್ಮಿಕರಿಗೆ ಕಿಟ್ಗಳನ್ನು ವಿತರಣೆ ಮಾಡ ಲಾಗುತ್ತಿದೆ. ಜಿಲ್ಲೆಯಲ್ಲಿ ೪ ಸಾವಿರ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ ವೀರಾಜಪೇಟೆ ತಾಲೂಕಿನಲ್ಲಿ ೨ ಸಾವಿರ ಮತ್ತು ಸೋಮವಾರಪೇಟೆ ಯಲ್ಲಿ ೨ ಸಾವಿರ ಅಸಂಘಟಿತ ಕಾರ್ಮಿಕರಿಗೆ ಸರಕಾರದ ಕಾರ್ಮಿಕ ಇಲಾಖೆಯ ವತಿಯಿಂದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ ಎಂದರು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರಶೇಖರ್, ಚೈತ್ರ, ಗಿರೀಶ್ ಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ, ತಮ್ಮಣೆಗೌಡ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು
ಕಾರ್ಮಿಕರ ಇಲಾಖೆಯ ವತಿಯಿಂದ ಕೂಡಿಗೆ ಕೂಡುಮಂಗಳೂರು, ಹೆಬ್ಬಾಲೆ, ಶಿರಂಗಾಲ, ತೊರೆನೂರು, ಗ್ರಾಮ ಪಂಚಾಯತಿ ವ್ಯಾಪ್ತಿಯ ನೋಂದಣಿ ಮಾಡಿಕೊಂಡು ೧೫೦ಕ್ಕೂ ಹೆಚ್ಚು ಮಂದಿಗೆ ಆಹಾರ ಕಿಟ್, ಸುರಕ್ಷತಾ ಕಿಟ್ ಟೂಲ್ಗಳನ್ನು ವಿತರಣೆ ಮಾಡಲಾಯಿತು.