ಮಳೆ ಹಾನಿ:ಮುಖ್ಯಮಂತ್ರಿ ವಿಡಿಯೋ ಸಂವಾದ

ಬೆAಗಳೂರು, ಜು. ೨೦: ಕೊಡಗು, ಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು. ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ ೮ ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು. ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು, ಜಿಲ್ಲಾಧಿಕಾರಿಗಳ ಪಿ. ಡಿ. ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ನದಿ ಮತ್ತು ಭೂ ಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು, ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು, ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದ್ದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

೪೦ ಸಾವಿರ ಕೋಟಿ ರೂ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ, ಜು. ೨೦: ರಾಷ್ಟಿçÃಯ ಆರೋಗ್ಯ ಮಿಷನ್ ಯೋಜನೆ ಅಡಿಯಲ್ಲಿ ಹಂಚಿಕೆಯಾದ ಹಣದ ಜೊತೆಗೆ, ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರವು ಸುಮಾರು ೪೦,೦೦೦ ಕೋಟಿ ರೂ. ಹಣದ ಯೋಜನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ. ಬಿಜೆಪಿ ಸದಸ್ಯರಾದ ದಿಲೀಪ್ ಸೈಕಿಯಾ ಮತ್ತು ರಮೇಶ್ ಚಂದರ್ ಕೌಶಿಕ್ ಅವರ ಲಿಖಿತ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು ಈ ವಿಷಯವನ್ನು ತಿಳಿಸಿದ್ದಾರೆ.

ಬಿಜೆಪಿ ಹೈಕಮಾಂಡಿಗೆ ಸೆಡ್ಡು ಹೊಡೆದ ಲಿಂಗಾಯಿತ ಮಠಾಧಿಪತಿಗಳು

ಬೆಂಗಳೂರು, ಜು. ೨೦: ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವಿಚಾರ ವಿವಿಧ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡಿಗೆ ಲಿಂಗಾಯತ ಮಠಾಧಿಪತಿಗಳು ನೇರಾನೇರ ಸೆಡ್ಡುಹೊಡೆದಿದ್ದಾರೆ. ನಾಯಕತ್ವ ಬದಲಾವಣೆ ಆದರೆ ಬಿಜೆಪಿಗೆ ಕೆಟ್ಟ ದಿನ ಕಾದಿದೆ ಎಂಬ ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದಾರೆ. ತಾ. ೨೬ ರಂದು ನಾಯಕತ್ವ ಬದಲಾವಣೆಗೆ ಡೆಡ್‌ಲೈನ್ ಎಂಬ ಚರ್ಚೆಗಳ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಪರವಾಗಿ ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ಈಗಾಗಲೇ ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು ೩೫ ಸ್ವಾಮೀಜಿಗಳು ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಅಭಯ ನೀಡಿದ್ದಾರೆ. ಇವರಷ್ಟೇ ಅಲ್ಲ, ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಕೂಡಾ ಬಿಎಸ್‌ವೈಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಎಸ್‌ವೈ ಕೋವಿಡ್ ನಂತಹ ಪರಿಸ್ಥಿತಿಯನ್ನು ಉತ್ತಮವಾಗಿ ಜಾಣ್ಮೆಯಿಂದ ನಿಭಾಯಿಸಿದ್ದಾರೆ. ಕೇಂದ್ರ ಸರ್ಕಾರವೂ ಇದಕ್ಕಾಗಿ ಶ್ಲಾಘನೆ ಮಾಡಿದೆ ಎಂದಿದ್ದಾರೆ. ಸಿಎಂ ಅವರನ್ನು ಬದಲಾವಣೆ ಮಾಡುವುದು ಕೆಟ್ಟ ಚಿಂತನೆ; ೨- ೩ ದಿನಗಳಲ್ಲಿ ಮಠಾಧೀಶರ ಸಭೆ ಕರೆಯುತ್ತೇವೆ ಮುಂದಿನ ನಡೆಯ ಬಗ್ಗೆ ಅಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಭೇಟಿಯ ಬಳಿಕ ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಹೈಕಮಾಂಡ್ ನಿಂದ ಸಿಎಂ ಬದಲಾವಣೆ ವಿಚಾರ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಮಠಾಧೀಶರು ಹಾಗೂ ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯ ಬಳಿಕ ಬೆಳ್ಳಾವಿ ಮಠದ ಮಹಂತಲಿAಗೇಶ್ವರ ಸ್ವಾಮಿಗಳ ಹೇಳಿಕೆ ನೀಡಿ,ಇನ್ನು ಎರಡು ವರ್ಷಗಳ ಕಾಲ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ ೩,೨೦೦ ಕ್ಕೂ ಹೆಚ್ಚು ಮಠಗಳು ಅವರನ್ನು ಉಳಿಸಿಕೊಳ್ಳುತ್ತೇವೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬೇಕು.ಸಿಎA ಬದಲಾವಣೆ ಆಗಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಉಳಿಗಾಲವಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.

ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ : ಸುರೇಶ್ ಕುಮಾರ್

ಬೆಂಗಳೂರು, ಜು. ೨೦: ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು. ಈಗ ಪಾಸಾಗುತ್ತಿರುವ ಎಲ್ಲ ಮಕ್ಕಳು ಕಳೆದ ವರ್ಷ ಮೊದಲ ಪಿಯುಸಿ ತರಗತಿಗಳನ್ನು ಪರೀಕ್ಷೆಯ ಮೂಲಕ ಉತ್ತೀರ್ಣರಾಗಿದ್ದು, ಆ ಅಂಕಗಳು ಮತ್ತು ಅವರ ೧೦ನೇ ತರಗತಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಎಸ್ಸೆಸ್ಸೆಲ್ಸಿ ಅಥವಾ ಇತರೆ ಮಂಡಳಿಗಳ ೧೦ನೇ ತರಗತಿಯಲ್ಲಿ ಪಡೆದ ವಿಷಯವಾರು ಅಂಕಗಳಲ್ಲಿ ಶೇ. ೪೫ರಷ್ಟು ಅಂಕಗಳು, ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಶೇ. ೪೫ರಷ್ಟು ಅಂಕಗಳು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಚುಟುವಟಿಕೆಗಳಿಗೆ ಶೇ. ೧೦ರಷ್ಟು ಅಂಕಗಳು ಮತ್ತು ಪ್ರಥಮ ಪಿಯುಸಿ ಪಡೆದ ಅಂಕಗಳಿಗೆ ಶೇ. ೫ ಅಂಕಗಳನ್ನು ಸಿದ್ಧಪಡಿಸಿ ಫಲಿತಾಂಶವನ್ನು ನಿರ್ಣಯಿಸಲಾಗಿದೆ ಎಂದು ಸುರೇಶ್ ಕುಮಾರ್ ಫಲಿತಾಂಶ ಘೋಷಣೆಯ ವಿವರಗಳನ್ನು ನೀಡಿದರು. ಒಂದು ವೇಳೆ ಘೋಷಿತ ಫಲಿತಾಂಶದಿAದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳೂ ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಹೇಳಿದರು.