ಸಿಹಿ ತಿನಿಸು ವಿನಿಮಯ ಮಾಡಿಕೊಂಡ ಬಿಎಸ್‌ಎಫ್ ಮತ್ತು ಪಾಕ್ ಸೈನಿಕರು
ನವದೆಹಲಿ, ಜು. ೨೧: ೨೦೧೯ರ ಬಳಿಕ ಇದೇ ಮೊದಲ ಬಾರಿಗೆ ಬಕ್ರಿದ್ ಆಚರಣೆ ಹಿನೆÀ್ನಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಪಾಕಿಸ್ತಾನ ಸೈನಿಕರು ಬುಧವಾರ ಗಡಿಯ ವಿವಿಧ ಸ್ಥಳಗಳಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು. ೨೦೧೯ರ ಆಗಸ್ಟ್ ೫ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆರ್ಟಿಕಲ್ ೩೭೦ ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಬಳಿಕ ಪಾಕಿಸ್ತಾನ ಏಕಪಕ್ಷೀಯವಾಗಿ ವಿನಿಮಯ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಪಾಕಿಸ್ತಾನದ ವಾಗಾ ಗಡಿಯ ಮುಂಭಾಗದಲ್ಲಿರುವ ಪಂಜಾಬ್‌ನ ಅಮೃತಸರ ಜಿಲ್ಲೆಯ ಜೆಸಿಪಿ (ಜಂಟಿ ಚೆಕ್ ಪೋಸ್ಟ್) ಅತ್ತಾರಿಯಲ್ಲಿ ಈದ್ ಸಂದರ್ಭದಲ್ಲಿ ಬಿಎಸ್‌ಎಫ್ ಮತ್ತು ಪಾಕಿಸ್ತಾನ ರೇಂಜರ್ಸ್ ನಡುವೆ ಸಿಹಿತಿಂಡಿಗಳ ವಿನಿಮಯ ನಡೆದಿದೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಇದೇ ವೇಳೆ ರಾಜಸ್ಥಾನ ಮುಂಭಾಗದಲ್ಲಿ ಉಭಯ ಪಡೆಗಳ ನಡುವೆ ಇದೇ ರೀತಿಯ ಸಿಹಿತಿಂಡಿ ವಿನಿಮಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಕೋವಿಡ್ ೧೯ನಿಂದಾಗಿ ಏಕಾಏಕಿ ಈ ಪದ್ಧತಿಯನ್ನು ಅಮಾನತುಗೊಳಿಸಲಾಗಿತ್ತು ಎಂದು ಹೇಳಿದರು.
ಸಹಕಾರ ಸಂಘಗಳ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಗ್ರೀನ್ ಸಿಗ್ನಲ್
ಬೆಂಗಳೂರು, ಜು. ೨೧: ರಾಜ್ಯ ಸರಕಾರದಿಂದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿರುವ ಸಹಕಾರ ಸಂಘಗಳ ಅಧ್ಯಕ್ಷ - ಉಪಾಧ್ಯಕ್ಷರ, ಪದಾಧಿಕಾರಿಗಳ ಚುನಾವಣೆ ನಡೆಸಲು ಅನುಮತಿಸಿ ಆದೇಶಿಸಿದೆ. ಈ ಮೂಲಕ ಚುನಾವಣೆ ನಡೆದಿರುವಂತಹ ಸಹಕಾರ ಸಂಘಗಳ ಅಧ್ಯಕ್ಷ - ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಹಕಾರ ಸಂಘಗಳ ನಿರ್ದೇಶಕ ಸ್ಥಾನಗಳಿಗೆ ಈಗಾಗಲೇ ದಿನಾಂಕ ೨೬.೪.೨೦೨೧ ಹಾಗೂ ಅದಕ್ಕಿಂತ ಮೊದಲು ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರ, ಪದಾಧಿಕಾರಿಗಳ ಚುನಾವಣೆಗಳು ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಸಂಬAಧಿಸಿದAತೆ ಅಧ್ಯಕ್ಷ - ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆ ನಡೆಸಲು ದಿನಾಂಕ ೧೫.೦೭.೨೦೨೧ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದಿಸಿರುತ್ತದೆ. ಆದುದರಿಂದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸಹಕಾರ ಸಂಘಗಳ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು ಅಧ್ಯಕ್ಷ - ಉಪಾಧ್ಯಕ್ಷರ, ಪದಾಧಿಕಾರಿಗಳು ಬಾಕಿ ಇದ್ದಲ್ಲಿ, ಅಂತಹ ಪ್ರಕರಣಗಳಿಗೆ ಸಂಬAಧಿಸಿದAತೆ ಅಧ್ಯಕ್ಷರ- ಉಪಾಧ್ಯಕ್ಷರ, ಪದಾಧಿಕಾರಿಗಳ ಚುನಾವಣೆಯನ್ನು ನಡೆಸಲು ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ಪತ್ರದ ಮೂಲಕ ನಿರ್ದೇಶಿಸಿದ್ದಾರೆ.
ಕೋವಿಡ್‌ನಿಂದ ಭಾರತದಲ್ಲಿ ೧ ಲಕ್ಷಕ್ಕೂ ಹೆಚ್ಚು ಮಕ್ಕಳು ಅನಾಥ
ನವದೆಹಲಿ, ಜು. ೨೧: ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕದಿAದಾಗಿ ದೇಶದಲ್ಲಿ ಸುಮಾರು ೧ ಲಕ್ಷಕ್ಕೂ ಅಧಿಕ ಮಕ್ಕಳು ಅನಾಥರಾಗಿದ್ದಾರೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಬಂದ ಮೊದಲ ೧೪ ತಿಂಗಳಲ್ಲಿಯೇ ಸುಮಾರು ೧ ಲಕ್ಷಕ್ಕೂ ಹೆಚ್ಚು ಭಾರತೀಯ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡ್ರಗ್ ಅಬ್ಯೂಸ್ (ಎನ್‌ಐಡಿಎ) ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದ್ದು, 'ಕೋವಿಡ್ ಸಾಂಕ್ರಾಮಿಕದ ಮೊದಲ ೧೪ ತಿಂಗಳಲ್ಲಿ ಭಾರತದಲ್ಲಿ ೧,೧೯,೦೦೦ ಮಕ್ಕಳು ಸೇರಿದಂತೆ ೨೧ ದೇಶಗಳಲ್ಲಿ ೧.೫ ದಶಲಕ್ಷಕ್ಕೂ ಹೆಚ್ಚು ಮಕ್ಕಳು ತಮ್ಮ ಪ್ರಾಥಮಿಕ ಮತ್ತು ದ್ವಿತೀಯಕ ಆರೈಕೆದಾರರನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತ ವರದಿ ದಿ ಲ್ಯಾನ್ಸೆಟ್ನಲ್ಲಿ ಪ್ರಕಟವಾಗಿದೆ ಎಂದು ಅಧ್ಯಯನ ತಿಳಿಸಿದೆ.
ಬಿಜೆಪಿ ವಿರೋಧಿ ರಂಗ ರಚನೆಗೆ ಮಮತಾ ಬ್ಯಾನರ್ಜಿ ಕರೆ
ಕೋಲ್ಕತಾ, ಜು. ೨೧: ದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ ಸಮಯ ಬಂದಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪೆಗಾಸಸ್ ವಿವಾದದ ಕುರಿತಂತೆ ಕೋಲ್ಕತ್ತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ನ ರ‍್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ. ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಗ್ಗೂಡಬೇಕು. ಯುದ್ಧಕ್ಕೆ ತಯಾರಾಗಲು ಇದು ಸರಿಯಾದ ಸಮಯ. ಪ್ರಜಾಪ್ರಭುತ್ವವನ್ನು ಕಾಪಾಡುವ ಬದಲು ಬಿಜೆಪಿ ದೇಶದಾದ್ಯಂತ ಬೇಹುಗಾರಿಕೆ ನಡೆಸುತ್ತಿದೆ. ತನ್ನ ಫೋನ್ ಟ್ಯಾಪ್ ಆಗುತ್ತಿರುವುದರಿಂದ ಯಾವುದೇ ಪ್ರತಿಪಕ್ಷದ ನಾಯಕರಿಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದರು.