ಸೋಮವಾರಪೇಟೆ, ಜು. ೨೦: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸಜ್ಜುಗೊಳಿಸಬೇಕು. ಅಭ್ಯರ್ಥಿಗಳು ಯಾರೇ ಆದರೂ ಗೆಲುವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಮುಖಂಡರುಗಳು ಸೂಚನೆ ನೀಡಿದರು.
ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಸೋಮವಾರಪೇಟೆ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಎಲ್ಲಾ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಪಕ್ಷವೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಇವರುಗಳ ಗೆಲುವಿಗೆ ಎಲ್ಲರೂ ಶ್ರಮವಹಿಸಬೇಕು ಎಂದರು.
ಸಭೆಯನ್ನು ಉದ್ಘಾಟಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆ, ಕಾರ್ಯಕ್ರಮಗಳು, ಕೋವಿಡ್ ಸಂದರ್ಭ ಕೈಗೊಂಡ ಆರೋಗ್ಯ ಸುಧಾರಣಾ ಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಸರ್ಕಾರದ ಯೋಜನೆಗಳನ್ನು ಗ್ರಾಮಮಟ್ಟಕ್ಕೆ ಕೊಂಡೊಯ್ಯಬೇಕು ಎಂದರು.
ಕೊರೊನಾ ಸಂಕಷ್ಟದ ಸಂದರ್ಭ ಬಿಜೆಪಿ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸೇವಾ ಕಾರ್ಯದಲ್ಲಿ ತೊಡಗಿದ್ದರು. ಸಂಘ ಪರಿವಾರದ ಕಾರ್ಯಕರ್ತರು, ಸೇವಾ ಭಾರತೀಯ ಸದಸ್ಯರ ನಿಸ್ವಾರ್ಥ ಸೇವೆಯನ್ನು ಎಲ್ಲರೂ ಸ್ಮರಿಸಬೇಕು. ಮುಂದೆಯೂ ಸಹ ಪಕ್ಷದ ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಂಜನ್ ತಿಳಿಸಿದರು.
ಕುಶಾಲನಗರ ತಾಲೂಕು ರಚನೆಗೆ ಸಂಬAಧಿಸಿದAತೆ ಕೆಲವರು ತಮ್ಮದೇ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಅಂದಿನ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು ಇವರನ್ನು ಭೇಟಿ ಮಾಡಲೂ ಮುಂದಾಗಿರಲಿಲ್ಲ. ಆ ಸಂದರ್ಭ ತಾನೇ ಖುದ್ದು ಹೋರಾಟ ಸಮಿತಿ ಸದಸ್ಯರ ನಿಯೋಗವನ್ನು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿಸಿ, ತಾಲೂಕು ರಚನೆಗೆ ಸಂಬAಧಿಸಿದAತೆ ಒತ್ತಡ ಹಾಕಿದ್ದೆ. ಇದೀಗ ಚುನಾವಣೆ ದೃಷ್ಟಿಯಿಂದ ನೂತನ ತಾಲೂಕು ರಚನೆ ನಮ್ಮ ಸಾಧನೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬAಧಿಸಿದAತೆ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷ ತೀರ್ಮಾನಿಸಲಿದೆ. ಹಲವಷ್ಟು ಮಂದಿ ಆಕಾಂಕ್ಷಿಗಳಿದ್ದರೂ ಸಹ ಅಂತಿಮವಾಗಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಬೇಕು. ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕು ಎಂದರು.
ಕೊರೊನಾ ಸಂದರ್ಭ ಪಕ್ಷದ ವತಿಯಿಂದ ಕೈಗೊಳ್ಳಲಾದ ಸೇವಾ ಚಟುವಟಿಕೆಗಳು, ಪ್ರಕೋಷ್ಠ, ಮೋರ್ಚಾಗಳ ಕಾರ್ಯವಿಧಾನ, ಪಕ್ಷ ಸಂಘಟನೆಗೆ ತೆಗೆದುಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ವಹಿಸಿದ್ದರು. ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಜಿಲ್ಲಾ ಬಿಜೆಪಿ ಮಾಜೀ ಅಧ್ಯಕ್ಷ ಬಿ.ಡಿ. ಮಂಜುನಾಥ್, ಮಂಡಲ ಭಾಗದ ಜಿಲ್ಲಾ ಸಮಿತಿ ಸದಸ್ಯರು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠಗಳ ಪ್ರಮುಖರು, ರಾಜ್ಯ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.