ಮಡಿಕೇರಿ, ಜು. ೨೦: ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೆöÊರ್ಸ್ ಅಸೋಸಿಯೇಷನ್ನ ೨ನೇ ವರ್ಷದ ವಾರ್ಷಿಕೋತ್ಸವ ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.
ಮಡಿಕೇರಿ ನಗರ ಠಾಣಾಧಿಕಾರಿ ಅಂತಿಮ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಚಾರ ನಿಯಮ ಪಾಲಿಸುವಂತೆ ಕರೆ ನೀಡಿದರು. ಈ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪದ್ಮನಾಭ, ಆರ್.ಟಿ.ಓ. ಅಧಿಕಾರಿ ಸುರೇಂದ್ರ, ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್, ಜಿಲ್ಲಾಧ್ಯಕ್ಷ ವಿನ್ಸೆಂಟ್ ಬಾಬು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು. ವಾರ್ಷಿಕೋತ್ಸವ ಅಂಗವಾಗಿ ತನಲ್ ಆಶ್ರಮದಲ್ಲಿರು ವವರಿಗೆ ಮಧ್ಯಾಹ್ನದ ಬೋಜನ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಕಿಟ್ಗಳನ್ನು ವಿತರಿಸಲಾಯಿತು.