ಮಡಿಕೇರಿ: ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆಯ ಒಟ್ಟು ೩೩೭ ಪುನರಾವರ್ತಿತರು ಸೇರಿದಂತೆ ಒಟ್ಟು ೫,೪೨೩ ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿದ್ದಾರೆ. ೨,೬೦೮ ಬಾಲಕರು ಹಾಗೂ ೨,೮೧೫ ಬಾಲಕಿಯರು ತೇರ್ಗಡೆಗೊಂಡಿದ್ದಾರೆ.
ಕೊರೊನಾ ಹಿನ್ನೆಲೆ ೨೦೨೦-೨೧ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್.ಎಸ್. ಎಲ್.ಸಿ., ಮೊದÀಲನೆಯ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಕೃಪಾಂಕ ಅನುಸರಿಸಿ ಫಲಿತಾಂಶವನ್ನು ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು ೭೬,೩೪೪ ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದಂತೆ ೬,೬೬,೪೯೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ೩,೩೫,೧೩೮ ವಿದ್ಯಾರ್ಥಿಗಳು ಹಾಗೂ ೩,೩೧,೩೫೯ ವಿದ್ಯಾರ್ಥಿನಿಯರಿದ್ದಾರೆ.
೧,೯೫,೬೫೦ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ೨,೫೨,೦೫೬ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಪಡೆದಿದ್ದರೆ ೧,೪೭,೦೫೫ ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಪರೀಕ್ಷೆ ಬರೆಯಲಿಚ್ಚಿಸುವವರಿಗೆ ಅವಕಾಶ
ಪ್ರಕಟವಾದ ಫಲಿತಾಂಶ ತಿರಸ್ಕರಿಸುವ ಹೊಸ ವಿದ್ಯಾರ್ಥಿಗಳಿಗೆ (ಫ್ರೆಷರ್ಸ್) ಮತ್ತು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಎರಡು ವರ್ಗದ ಅಭ್ಯರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ತಾ.೩೦ ರಂದು ಕೊನೆಯ ದಿನವಾಗಿದೆ.
ಹಾಗೆಯೇ ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೊಂದಾಯಿಸಿಕೊAಡಿದ್ದ ಖಾಸಗಿ (ಪ್ರೆöÊವೇಟ್) ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಬೇಕಿದೆ. ಈ ಖಾಸಗಿ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ನೋಂದಾಯಿಸಿಕೊAಡಿರುವುದರಿAದ ಅವರು ಮತ್ತೆ ಪರೀಕ್ಷೆಗೆ ನೋಂದಾಯಿಸಬೇಕಾದ ಅಗತ್ಯವಿಲ್ಲ.
ಈ ಮೂರು ವರ್ಗದ ಅಭ್ಯರ್ಥಿಗಳಿಗೆ ಆಗಸ್ಟ್ ೧೯ ರಿಂದ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ನಲ್ಲಿ ನಡೆಯುವ ಪರೀಕ್ಷೆ ಸಹ ವಾರ್ಷಿಕ ಪರೀಕ್ಷೆಯೇ ಆಗಿರುತ್ತದೆ. ಈ ಬಾರಿಯ ಫಲಿತಾಂಶ ತಿರಸ್ಕರಿಸಿ ಆಗಸ್ಟ್ನಲ್ಲಿ ಪರೀಕ್ಷೆಗೆ ಹಾಜರಾಗುವ ಫ್ರೆಷರ್ ಅಭ್ಯರ್ಥಿಗಳನ್ನು ಫ್ರೆಷರ್ ಎಂದೇ ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆಗಸ್ಟ್ ೧೯ ರಿಂದ ಸೆಪ್ಟೆಂಬರ್ ೩ ರವರೆಗೆ ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.