ವೀರಾಜಪೇಟೆ, ಜು. ೨೦: ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರಿಗೆ ಸೇವಾ ಸಂಸ್ಥೆಯು ಆಹಾರ ಕಿಟ್‌ಗಳನ್ನು ವಿತರಿಸಿದರು. ಬೆಂಗಳೂರು ಮೂಲದ ಬೆಳಕು ಫೌಂಡೇಶನ್ ಸೇವಾ ಸಂಸ್ಥೆ ಮತ್ತು ಸೆಲ್ಕೋ ಸೋಲಾರ್ ಸಂಸ್ಥೆಯ ವತಿಯಿಂದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಹಿನ್ನೆಲೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಯಿತು. ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಮೂಲಕ ನಡೆದ ಕಿಟ್ ವಿತರಣೆ ವೇಳೆ ಗ್ರಾ. ಪಂ. ಅಧ್ಯಕ್ಷರಾದ ನಡಿಕೇರಿಯಂಡ ಶೀಲಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಕೆ ಪ್ರಮೋದ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಎA. ಪರಮೇಶ್ವರ. ಕೆ.ಎಂ. ರಾಮಯ್ಯ ಮತ್ತಿತರರು ಹಾಜರಿದ್ದರು.