ಮಡಿಕೇರಿ, ಜು. ೨೩: ಅಯ್ಯಂಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಸದಸ್ಯರನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆರೋಪಿಸಿದ್ದು, ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ, ಜು. ೨೩: ಅಯ್ಯಂಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಸದಸ್ಯರನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆರೋಪಿಸಿದ್ದು, ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಡಲಾಗಿದೆ. ಈ ಬಗ್ಗೆ ಗ್ರಾ.ಪಂ ಸದಸ್ಯ ಏಕಾಂಗಿ ಪ್ರತಿಭಟನೆ ಕೂಡ ಮಾಡಿದ್ದಾರೆ. ನರೇಗಾ ಯೋಜನೆಯ ೧,೨೭,೭೨,೭೦೦ ರೂ. ಹಣ ಸಮರ್ಪಕ ವಾಗಿ ಹಂಚಿಕೆಯಾಗಿಲ್ಲ. ಪಂಚಾಯ್ತಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯವಾಗಿ ಮಾರ್ಪಟ್ಟಿದೆ. ಇತರ ಪಕ್ಷದ ಬೆಂಬಲಿತ ಸದಸ್ಯರಿಗೆ ಮನ್ನಣೆ ಇಲ್ಲ ಎಂದು ತಿಳಿಸಿದರು.
ಗ್ರಾ.ಪಂ ಸದಸ್ಯ ಅಬ್ದುಲ್ ರಶೀದ್ ಮಾತನಾಡಿ, ಸಾಮಾನ್ಯ ಸಭೆಯಲ್ಲಿ ಅನುದಾನ ಹಂಚಿಕೆ ಬಗ್ಗೆ ಪ್ರಸ್ತಾಪಿಸಿಲ್ಲ. ಪಿಡಿಓ ಹಾಗೂ ಅಧ್ಯಕ್ಷರು ಕಮೀಷನ್ ಆಧಾರದಲ್ಲಿ ಅಭಿವೃದ್ಧಿ ಕಾಮಗಾರಿ ಯನ್ನು ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಅಭಿವೃದ್ಧಿ ಬಗ್ಗೆ ಚರ್ಚಿಸದೆ ನರೇಗಾ ಯೋಜನೆಯ ಕ್ರಿಯಾ ಯೋಜನೆ ಹೇಗೆ ತಯಾರಿಸಿದರು ಎಂದು ಪ್ರಶ್ನಿಸಿದರು.
ಅದಲ್ಲದೆ ಕಸ ವಿಲೇವಾರಿ ವಾಹನ ನಿಲುಗಡೆಗೆಂದು ನಿರ್ಮಿಸಿದ ಶೆಡ್ಗೆ ರೂ ೫೦ ಸಾವಿರ ಖರ್ಚಾಗಿದೆ. ಈ ಬಗ್ಗೆ ಕೂಡ ಚರ್ಚೆ ನಡೆಸಿಲ್ಲ. ಸಾಮಾನ್ಯ ಸಭೆಯ ನಡಾವಳಿಯನ್ನು ಕೂಡ ಸದಸ್ಯರಿಗೆ ನೀಡುವುದಿಲ್ಲ. ಭ್ರಷ್ಟಾಚಾರ ಕೂಡ ಪಂಚಾಯ್ತಿಯಲ್ಲಿ ನಡೆಯುತ್ತಿದ್ದು, ಹಾಲಿ ಕಾರ್ಯನಿರ್ವಹಿಸುತ್ತಿರುವ ಪ್ರಭಾರ ಪಿಡಿಓ ಅವರನ್ನು ವರ್ಗಾಯಿಸಿ ಪ್ರಾಮಾಣಿಕ ಅಧಿಕಾರಿಯನ್ನು ನೇಮಿಸಬೇಕೆಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಬಿ.ಇ.ನಾಚಪ್ಪ, ಯುವ ಕಾಂಗ್ರೆಸ್ ವಲಯ ಅಧ್ಯಕ್ಷ ರೌಫ್, ಪ್ರಮುಖರಾದ ಇಸಾಕ್, ಇಮ್ರಾನ್ ಹಾಜರಿದ್ದರು.