ನಾಪೋಕ್ಲು, ಜು. ೨೩: ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಪಿ. ಬಾಣೆ ಸ.ಹಿ.ಪ್ರಾ.ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಶಾಲಾ ತರಗತಿ ಕಟ್ಟಡಕ್ಕೆ ಕಕ್ಕಬ್ಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ. ಪಂ.ಉಪಾಧ್ಯಕ್ಷೆ ರಂಶೀನ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಹಾಜಿ, ಉಪಾಧ್ಯಕ್ಷ ಅಬ್ದುಲ್ ಅಫೀಲ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಅಜೀಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಅಹಮ್ಮದ್, ಬಶೀರ್, ರಝ, ಸಫೀಯ ಬೀನ ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ, ಮತ್ತು ಸಹ ಶಿಕ್ಷಕಿಯರು ಹಾಗೂ ಗ್ರಾಮಸ್ಥರು ಇದ್ದರು.