ಮಡಿಕೇರಿ, ಜು. ೨೨: ತುಮಕೂರಿನ ಸಿದ್ಧಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಇಂದು ಮಡಿಕೇರಿಗೆ ಭೇಟಿ ನೀಡಿದರು.

ತಾ.೨೨ ರಂದು ಸಿದ್ಧಗಂಗಾ ಶ್ರೀಗಳ ಹುಟ್ಟುಹಬ್ಬ ಹಿನ್ನೆಲೆ ಅವರು ಮಡಿಕೇರಿಗೆ ಬಂದಿದ್ದಾರೆ. ಬೆಳಿಗ್ಗೆ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಶ್ರೀಗಳು, ಗದ್ದುಗೆಯಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿಡಿಗಳಲೆಯ ಇಮ್ಮಡಿ ಶಿವಲಿಂಗ ಸ್ವಾಮೀಜಿ ಹಾಗೂ ಇನ್ನಿತರರನ್ನು ಭೇಟಿ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.