ರಾಜ್ಯದಲ್ಲಿಂದು ೧೬೫೩ ಹೊಸ ಪ್ರಕರಣಗಳು ಪತ್ತೆ
ಬೆಂಗಳೂರು, ಜು. ೨೨: ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ೧೬೫೩ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ೨೮,೮೯,೯೯೪ಕ್ಕೆ ಏರಿಕೆಯಾಗಿದೆ. ೨೫೭೨ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ೨೮,೨೮,೯೮೩ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ ೨೪೬೯೫ ಸಕ್ರಿಯ ಪ್ರಕರಣಗಳು ಇರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೋವಿಡ್-೧೯ ಸೋಂಕಿನಿAದ ಇಂದು ೩೧ ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ ೩೬,೨೯೩ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡವಾರು ಪ್ರಮಾಣ ಶೇ.೧.೧೭ ರಷ್ಟಿದ್ದರೆ, ಮರಣ ಪ್ರಮಾಣ ಶೇ.೧.೮೭ ರಷ್ಟಿದೆ.ಬೆಂಗಳೂರಿನಲ್ಲಿ ೪೧೮ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ ೧೨,೨೩,೬೪೪ಕ್ಕೆ ಏರಿಕೆಯಾಗಿದೆ.೧೧೬೨ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ ೧೧,೯೯,೦೭೭೮ಕ್ಕೆ ಏರಿಕೆಯಾಗಿದೆ. ಸೋಂಕಿನಿAದ ಇಂದು ಮೂವರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ ೧೫,೮೧೭ಕ್ಕೆ ಏರಿಕೆಯಾಗಿದೆ.
ಪಿಯುಸಿ ಸೇರಲು ಎಲ್ಲರಿಗೂ ಪ್ರವೇಶಾವಕಾಶ
ಬೆಂಗಳೂರು, ಜು. ೨೨: ಈ ಬಾರಿ ೧೦ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಗುರುವಾರ ಕೊನೆದಿನದ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕೊನೆದಿನ ದಿನದ ಪರೀಕ್ಷೆಗೆ ಸಂಬAಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಯಾವುದೇ ವಿದ್ಯಾರ್ಥಿಗೂ ತೊಂದರೆಯಾಗದAತೆ ಎಲ್ಲರಿಗೂ ಪ್ರಥಮ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪಿಯು ಕಾಲೇಜುಗಳಲ್ಲಿ ಒಟ್ಟಾರೆ ೧೨ ಲಕ್ಷ ಸೀಟುಗಳು ಲಭ್ಯವಿವೆ. ಜಿಲ್ಲಾವಾರು ಅಂಕಿ-ಅAಶಗಳನ್ನು ಸಂಗ್ರಹಿಸಿದ್ದು ಅದಕ್ಕಾಗಿ ಅಧಿಕಾರಿಗಳ ಸಮನ್ವಯ ವ್ಯವಸ್ಥೆ ರೂಪಿಸಲಾಗುತ್ತಿದೆ. ಯಾವುದೇ ವಿದ್ಯಾರ್ಥಿಗೂ ಪಿಯು ಪ್ರವೇಶಕ್ಕೆ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ. ಯಾವುದೇ ಸಂಸ್ಥೆಗಳು ಸೀಟು ಹೆಚ್ಚಳದ ಪ್ರಸ್ತಾವನೆಯನ್ನು ಸಲ್ಲಿಸಿದರೆ, ಅವರ ಬೇಡಿಕೆಯನ್ನು ಪುರಸ್ಕರಿಸಲಾಗುವುದು ಎಂದು ಅವರು ಹೇಳಿದರು. ಆಗಸ್ಟ್ ೧೦ರ ವೇಳೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು ಎಂದು ತಿಳಿಸಿದ್ದಾರೆ.