ಕೂಡಿಗೆ ಜು. ೨೨: ಕುಶಾಲನಗರ ತಾಲೂಕು ವ್ಯಾಪ್ತಿಯ ಕೂಡಿಗೆ ಕೂಡುಮಂಗಳೂರು ಮುಳ್ಳುಸೋಗೆ ಹೆಬ್ಬಾಲೆ ವ್ಯಾಪ್ತಿಯಲ್ಲಿ ಪೈಸಾರಿ ಮತ್ತು ಕಂದಾಯ ಇಲಾಖೆಗೆ ಒಳಪಡುವ ಜಾಗದಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿಕೊಂಡಿರುವ ಗ್ರಾಮಸ್ಥರಿಗೆ ಹಕ್ಕು ಪತ್ರವನ್ನು ನೀಡುವುದಾಗಿ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಭರವಸೆ ನೀಡಿದ್ದಾರೆ. ಕೂಡಿಗೆ ಕೂಡುಮಂಗಳೂರು ವ್ಯಾಪ್ತಿಯ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಶಾಸಕರು ಅಗಮಿಸಿದ್ದ ಸಂದರ್ಭ ಆ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಶಾಸಕರಿಗೆ ಮನವಿಯನ್ನು ಸಲ್ಲಿಸಿ ಹಕ್ಕು ಪತ್ರವನ್ನು ನೀಡುವಂತೆ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂ. ಪಿ. ಅಪ್ಪಚ್ಚು ರಂಜನ್ ಅಯಾ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಂಡಿರುವವರು ಅದಕ್ಕೆ ಸಂಬAಧಿಸಿದ ಅರ್ಜಿಗಳನ್ನು ಸಲ್ಲಿಸಬೇಕು. ಅದರ ಅಧಾರದ ಮೇಲೆ ತಾಲೂಕು ತಹಶೀಲ್ದಾರರ ನಿಯಮನುಸಾರವಾಗಿ ಸ್ಧಳ ಪರಿಶೀಲನೆ ನಡೆಸಿ ಹಕ್ಕು ಪತ್ರಗಳನ್ನು ನೀಡಲಾಗುವುದು. ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಮೊದಲು ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸದಸ್ಯರಾದ ಕೆ. ಕೆ. ಭೋಗಪ್ಪ ಚಂದ್ರಶೇಖರ್ ಚೈತ್ರ ಗಿರೀಶ್‌ಕುಮಾರ್ ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳ ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಕೂಡುಮಂಗಳೂರು ಬೂತ್ ಸಮಿತಿಯ ಅಧ್ಯಕ್ಷ ಪ್ರಮೀಣ್ ಮಂಜುನಾಥ ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮನು ನಂಜುAಡ ಮಾಜಿ ಸದಸ್ಯರಾದ ಕುಮಾರ್ ಸ್ವಾಮಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.