ಗೋಣಿಕೊಪ್ಪಲು, ಜು. ೨೩: ಕೋವಿಡ್ ೨ನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ವಸತಿ ಶಾಲೆಗಳು ಹಾಗೂ ಕಾಲೇಜುಗಳು ಬಂದ್ ಆಗಿದ್ದವು. ಇದೀಗ ಲಾಕ್ಡೌನ್ ತೆರವು ನಂತರ ಶಾಲಾ ಕಾಲೇಜುಗಳು ಪ್ರಾರಂಭವಾಗುವ ಬಗ್ಗೆ ಸರ್ಕಾರ ಸೂಚನೆ ನೀಡಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯಗಳನ್ನು ಪ್ರಾರಂಭಿಸುವAತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಡಗು ಜಿಲ್ಲೆಯ ಜಿಲ್ಲಾ ಸಂಚಾಲಕ ಶಿನೋಜ್ ಆಚಾರ್ಯ ಕೊಡಗು ಜಿಲ್ಲಾಧಿಕಾರಿಗಳ ಪರವಾಗಿ ಕಾರ್ಯದರ್ಶಿ ಮಹೇಶ್ ಅವರಿಗೆ ಮನವಿ ಪತ್ರ ನೀಡಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳಿಗೆ ಅವಶ್ಯವಿರುವ ಬಸ್ ಪಾಸ್ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ಎಂ.ಕೆ.ಹೃತಿಕ್, ಮಿಥುನ್, ಮನೋಜ್, ಅಭಿಷೇಕ್ ಹಾಗೂ ಅಕ್ಷಿತ್ ಹಾಜರಿದ್ದರು.