ಮಡಿಕೇರಿ, ಜು.೨೩: ಜಿಲ್ಲೆಯಲ್ಲಿ ಶುಕ್ರವಾರ ೪೦ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೩೦ ಆರ್ಟಿಪಿಸಿಆರ್ ಮತ್ತು ೧೦ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೧, ಸೋಮವಾರಪೇಟೆ ತಾಲೂಕಿನಲ್ಲಿ ೨೩, ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೧,೨೧೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೪೭೪ ಮಂದಿ ಗುಣಮುಖರಾಗಿದ್ದಾರೆ. ೩೪೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಒಟ್ಟು ೩೯೦ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೮೮ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೧೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.