ಕೂಡಿಗೆ, ಜು. ೨೪: ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯಿಂದ ನಾಲ್ಕು ಬಾಗಿಲುಗಳ ಮೂಲಕ ನದಿಗೆ ಹರಿಯುವ ನೀರಿನ ವೀಕ್ಷಣೆಗೆ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿ ತೂಗು ಸೇತುವೆಯನ್ನು ನಿರ್ಮಾಣ ಮಾಡುವ ಚಿಂತನೆಯನ್ನು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ವ್ಯಕ್ತಪಡಿಸಿದರು.

ಅವರು ಹಾರಂಗಿಯ ಅಣೆಕಟ್ಟೆಗೆ ಭೇಟಿ ನೀಡಿ ಅಲ್ಲಿನ ನೀರಿನ ಮಟ್ಟವನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಅಣೆಕಟ್ಟೆಯಿಂದ ಬೀಳುವ ಕೂಡಿಗೆ, ಜು. ೨೪: ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯಿಂದ ನಾಲ್ಕು ಬಾಗಿಲುಗಳ ಮೂಲಕ ನದಿಗೆ ಹರಿಯುವ ನೀರಿನ ವೀಕ್ಷಣೆಗೆ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿ ತೂಗು ಸೇತುವೆಯನ್ನು ನಿರ್ಮಾಣ ಮಾಡುವ ಚಿಂತನೆಯನ್ನು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ವ್ಯಕ್ತಪಡಿಸಿದರು.

ಅವರು ಹಾರಂಗಿಯ ಅಣೆಕಟ್ಟೆಗೆ ಭೇಟಿ ನೀಡಿ ಅಲ್ಲಿನ ನೀರಿನ ಮಟ್ಟವನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಅಣೆಕಟ್ಟೆಯಿಂದ ಬೀಳುವ ಅಭಿಯಂತರ ಮಹೇಂದ್ರ ಕುಮಾರ್ ನವರಿಗೆ ಸೂಚನೆ ನೀಡಿದರು.

ಅಲ್ಲದೆ ಹಾರಂಗಿ ಅಣೆಕಟ್ಟೆಯ ಪ್ರದೇಶವು ೪೦೦ ಎಕರೆಗಳಷ್ಟಿದ್ದು , ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡುವ ನಿಟ್ಟಿನಲ್ಲಿ ಹಾರಂಗಿಯ ಬೃಂದಾವನದ ವಿವಿಧ ಯೋಜನೆಗಳ ಪ್ರಗತಿಗೆ ಪ್ರಯತ್ನ ಮಾಡಲಾಗುವುದು. ಅಲ್ಲದೆ ಮುಂದಿನ ದಿನಗಳಲ್ಲಿ ಬೃಂದಾವನದ ಉದ್ಯಾನವನ ಅಭಿವೃದ್ಧಿ ಮತ್ತು ಪ್ರವಾಸಿಗರ ಆಕರ್ಷಣೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು.

ಈ ಸಂದರ್ಭ ಕೂಡುಮಂಗ ಳೂರು ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ, ಮೂಡಾ ಅಧÀ್ಯಕ್ಷ ಎಂ.ಎA. ಚರಣ್, ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತರಾಜ್, ಪ್ರಮುಖರಾದ ವೈಶಾಕ್, ಶಿವಕುಮಾರ್ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್, ಸದಸ್ಯ ಮಣಿಕುಮಾರ್ ಸೇರಿದಂತೆ ಮೊದಲಾದವರು ಇದ್ದರು.