ಇಂದಿನಿAದ ಪದವಿ ಕಾಲೇಜುಗಳು ಪುನರಾರಂಭ
ಬೆAಗಳೂರು, ಜು. ೨೫: ರಾಜ್ಯದಲ್ಲಿ ತಾ. ೨೬ ರಿಂದ (ಇಂದಿನಿAದ) ಪದವಿ ಕಾಲೇಜುಗಳು ಪುನರಾರಂಭಗೊಳ್ಳಲಿವೆ. ಆದರೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಇಬ್ಬರಿಗೂ ಸಾಕಷ್ಟು ನಿಯಮಗಳನ್ನು ರೂಪಿಸಲಾಗಿದೆ. ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಬೇಕು ಎನ್ನುವುದು ಕಡ್ಡಾಯ ನಿಯಮ. ಕಾಲೇಜಿನ ಗೇಟಿನ ಬಳಿಯೇ ವಿದ್ಯಾರ್ಥಿಗಳ ಲಸಿಕಾ ಪ್ರಮಾಣ ಪತ್ರ ಪರಿಶೀಲಿಸಿ ನಂತರವಷ್ಟೇ ಪ್ರವೇಶ ನೀಡಲಾಗುತ್ತದೆ. ಕನಿಷ್ಟ ೧ ಲಸಿಕೆಯನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿದೆ. ಇನ್ನು ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕಾಲೇಜಿಗೆ ಆಗಮಿಸುವ ೭೨ ಗಂಟೆಗಳ ಮುಂಚೆ ಅವರು ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿರಬೇಕಿದೆ. ಇಷ್ಟೆಲ್ಲಾ ನಿಯಮಗಳಿದ್ದರೂ ಯಾವುದೇ ವಿದ್ಯಾರ್ಥಿಗೆ ಹಾಜರಾತಿ ಕಡ್ಡಾಯವಿಲ್ಲ ಎನ್ನುವುದನ್ನೂ ತಿಳಿಸಲಾಗಿದೆ. ಹಾಗೆಂದು ಕಾಲೇಜಿಗೆ ವಿದ್ಯಾರ್ಥಿಗಳು ಬಂದಿಲ್ಲ ಎಂದು ಪ್ರಾಧ್ಯಾಪಕರು ಸುಮ್ಮನೆ ಇರುವಂತಿಲ್ಲ. ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರದಿದ್ದರೂ ಪ್ರಾಧ್ಯಾಪಕರಿಗೆ ಕಡ್ಡಾಯ ಹಾಜರಾತಿ ಇರಲಿದೆ. ಕಾಲೇಜುಗಳನ್ನು ಕಡ್ಡಾಯವಾಗಿ ತೆರೆಯುವಂತೆ ವಿ.ವಿ.ಗಳಿಂದ ಸೂಚನೆ ನೀಡಲಾಗಿದೆ. ಈಗಾಗಲೇ ಶೇ. ೭೫ ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಶೀಘ್ರದಲ್ಲೇ ಬಾಕಿ ಉಳಿದ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ಡಿ.ಸಿ.ಎಂ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಕೋವಿಡ್ ಮಾರ್ಗಸೂಚಿ ಅನುಸರಿಸಿ ಭೌತಿಕ ತರಗತಿ ಆರಂಭವಾಗುತ್ತದೆ. ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿAಗ್, ಡಿಪ್ಲೊಮಾ ತರಗತಿಗಳು ನಡೆಯಲಿವೆ. ಆದರೆ ಆನ್ಲೈನ್ ತರಗತಿ ನಿಲ್ಲಿಸುವುದಿಲ್ಲ. ಕಾಲೇಜುಗಳಲ್ಲೇ ತರಗತಿ ಆರಂಭವಾದರೂ ಆನ್ಲೈನ್ ತರಗತಿ ಮುಂದುವರಿಯಲಿದೆ. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮೊದಲ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕಾಲೇಜಿನಲ್ಲಿ ತರಗತಿಗಳ ಒಳಗೆ ಕೂಡಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಸ್ಯಾನಿಟೈಸರ್ ಬಳಕೆ, ಕಾಲೇಜು ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕಾಲೇಜು ಆಡಳಿತ ಮಂಡಳಿಗೂ ಸೂಚಿಸಲಾಗಿದೆ.
ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆ.ಪಿ. ನಡ್ಡಾ
ಬೆಳಗಾವಿ/ಗೋವಾ, ಜು. ೨೫: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಚರ್ಚೆಗಳಿಗೆ ತಾ. ೨೫ ರಂದು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಯನ್ನು ನಿರೀಕ್ಷಿಸಲಾಗುತ್ತಿತ್ತು. ಆದರೆ ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟಾçಧ್ಯಕ್ಷರು ತಾ. ೨೫ ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚು ಮಾಡಿದೆ. ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ "ಸಿಎಂ ಬದಲಾವಣೆ ಕುರಿತು ಹೈಕಮಾಂಡ್ನಿAದ ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿದ್ದೇನೆ. ತಾ. ೨೬ ರಂದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ" ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ಇತ್ತ ಗೋವಾಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟಾçಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಬದಲಾವಣೆ ವಿಷಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ನಡ್ಡಾ ಹೇಳಿದ್ದಾರೆ.