ಮಡಿಕೇರಿ, ಜು. ೨೭: ನಗರಸಭೆಯ ಕಚೇರಿ ಕೆಲಸ ಕಾರ್ಯಗಳಿಗೆ ಸಂಬAಧಪಟ್ಟAತೆ ಮಧ್ಯವರ್ತಿಗಳು (ಬ್ರೋಕರ್) ಬರುವುದು ನಿಷೇಧಿಸಲಾಗಿದೆ ಹಾಗೂ ಸಾರ್ವಜನಿಕರು ತಮ್ಮ ಕೆಲಸಗಳಿಗೆ ತಾವೇ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಕೆಲಸ ಕಾರ್ಯಗಳನ್ನು ನೆರವೇರಿಸಿಕೊಳ್ಳುವುದು ಎಂದು ಪೌರಾಯುಕ್ತ ರಾಮದಾಸ್ ತಿಳಿಸಿದ್ದಾರೆ.
ಕಚೇರಿ ಅಧಿಕಾರಿ, ಸಿಬ್ಬಂದಿಗಳು ಕಚೇರಿ ಒಳಗೆ ಮತ್ತು ಆವರಣದಲ್ಲಿ ಮಧ್ಯವರ್ತಿಗಳ ಜೊತೆಯಲ್ಲಿ ಮಾತನಾಡುವುದು, ವ್ಯವಹರಿಸುವುದು ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.