ಮಡಿಕೇರಿ, ಜು. ೨೭: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ ಅವರುಗಳನ್ನು ಸನ್ಮಾನಿಸಲಾಯಿತು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಪಿ. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ನಗರಸಭಾ ಮಾಜಿ ಅಧ್ಯಕ್ಷೆ ಜುಲೆಕಾಬಿ, ಮಾಜಿ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಫಿಲೋಮಿನಾ, ನಗರ ಹಿಂದುಳಿದ ವಿಭಾಗದ ಅಧ್ಯಕ್ಷ ಜಿ.ಸಿ. ಜಗದೀಶ್, ನಗರ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮುದ್ದುರಾಜ್, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಫರ್ದಾನ ಮತ್ತಿತರರು ಇದ್ದರು.