ಮಡಿಕೇರಿ, ಜು. ೨೬: ಜಿಲ್ಲೆಯಲ್ಲಿ ಸೋಮವಾರ ೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೩, ವೀರಾಜಪೇಟೆ ತಾಲೂಕಿನಲ್ಲಿ ೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೧,೩೮೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೩ ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೬೨೯ ಮಂದಿ ಗುಣಮುಖರಾಗಿದ್ದಾರೆ. ೩೬೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಒಟ್ಟು ೩೯೨ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೮೬ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೨.೧೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.