ಗೋಣಿಕೊಪ್ಪ ವರದಿ, ಜು. ೨೭: ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯ ಅರಣ್ಯ ಇಲಾಖೆ ಮತ್ತು ಗಿರಿಜನ ಅಭಿವೃದ್ಧಿ ಇಲಾಖೆ ಮುಂದಾಗಬೇಕು ಎಂದು ವನವಾಸಿ ಕಲ್ಯಾಣ ರಾಜ್ಯಾಧ್ಯಕ್ಷ ಚೆಕ್ಕೇರ ಮನು ಕಾವೇರಪ್ಪ ಒತ್ತಾಯಿಸಿದ್ದಾರೆ.

೨೦೦೬ ರಲ್ಲಿ ಜಾರಿಗೆ ಬಂದಿರುವ ಅರಣ್ಯ ಹಕ್ಕು ಕಾಯ್ದೆಯ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯ ಜಂಟಿ ಸುತ್ತೋಲೆ ಹೊರಡಿಸಿರುವುದನ್ನು ಸ್ಥಳೀಯ ಆಡಳಿತ ಗಂಭೀರವಾಗಿ ಪರಿಗಣಿಸ ಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈ ಬಗ್ಗೆ ಜುಲೈ ೬ ರಂದು ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವೇಡ್ಕ್ರ್ ಮತ್ತು ಬುಡಕಟ್ಟು ವ್ಯವಹಾರ ಸಚಿವ ಅರ್ಜುನ್ ಮುಂಡಾ ಜಂಟಿಯಾಗಿ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹ. ಈ ಹಿನ್ನೆಲೆ ಅರಣ್ಯ ಇಲಾಖೆಯಿಂದ ಆಗುತ್ತಿದ್ದ ಕಿರುಕುಳ ತಪ್ಪಿದಂತಾಗಿದೆ. ಪರಸ್ಪರ ಸಹಮತದ ನಿಬಂಧನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದರು.

ಅರಣ್ಯ ಸಂಪನ್ಮೂಲಗಳ ನಿರ್ವಹಣೆಗೆ ಸಮುದಾಯ ಹಕ್ಕು ನೀಡುವುದು, ಕಿರು ಉತ್ಪನ್ನ ಬಳಸಿಕೊಳ್ಳುವುದು, ಅಭಿವೃದ್ಧಿ ಪೂರಕ ಒತ್ತಾಯಿಸಿದರು.

ಈ ಬಗ್ಗೆ ಜುಲೈ ೬ ರಂದು ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವೇಡ್ಕ್ರ್ ಮತ್ತು ಬುಡಕಟ್ಟು ವ್ಯವಹಾರ ಸಚಿವ ಅರ್ಜುನ್ ಮುಂಡಾ ಜಂಟಿಯಾಗಿ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹ. ಈ ಹಿನ್ನೆಲೆ ಅರಣ್ಯ ಇಲಾಖೆಯಿಂದ ಆಗುತ್ತಿದ್ದ ಕಿರುಕುಳ ತಪ್ಪಿದಂತಾಗಿದೆ. ಪರಸ್ಪರ ಸಹಮತದ ನಿಬಂಧನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದರು.

ಅರಣ್ಯ ಸಂಪನ್ಮೂಲಗಳ ನಿರ್ವಹಣೆಗೆ ಸಮುದಾಯ ಹಕ್ಕು ನೀಡುವುದು, ಕಿರು ಉತ್ಪನ್ನ ಬಳಸಿಕೊಳ್ಳುವುದು, ಅಭಿವೃದ್ಧಿ ಪೂರಕ ಯೋಜನೆಯನ್ನು ತಲುಪಿಸು ವಂತಾಗಬೇಕು ಎಂದು ಅವರು ಒತ್ತಾಯಿಸಿದರು.

ವನವಾಸಿ ಕಲ್ಯಾಣ ಜಿಲ್ಲಾಧ್ಯಕ್ಷ ವೈ.ಎಂ. ಪ್ರಕಾಶ್ ಮಾತನಾಡಿ, ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಅರಣ್ಯ ಇಲಾಖೆ ಉದ್ದೇಶಪೂರ್ವಕವಾಗಿ ತಡೆ ಮಾಡುತ್ತಿದೆ. ಇಲ್ಲದ ಸಾಕ್ಷö್ಯ ಒದಗಿಸು ವಂತೆ ಒತ್ತಡ ಹೇರುವುದರಿಂದ ಬುಡಕಟ್ಟು ಜನರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯ ಜಂಟಿ ಸುತ್ತೋಲೆಯನ್ನು ಪರಿಗಣಿಸಬೇಕು ಎಂದರು.

ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹರೀಶ್ ಪರಮ, ಉಪಾಧ್ಯಕ್ಷ ಚೆಟ್ಟಂಗಡ ಮಹೇಶ್ ಮಂದಣ್ಣ, ಮಹಿಳಾ ಸಂಚಾಲಕಿ ಪಿ.ಟಿ. ಸರೋಜ ಇದ್ದರು.