ಗೋಣಿಕೊಪ್ಪಲು, ಜು. ೨೬: ಸಂಘ ಪರಿವಾರದ ಮೂಲಕ ಗುರುತಿಸಿ ಕೊಂಡು ಭಾರತಿಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತ ನಾಗಿ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿ ಇತ್ತೀಚೆಗೆ ನಿಧನರಾದ ಅಮ್ಮತ್ತಿಯ ಐನಂಡ ಜಪ್ಪು ಅಚ್ಚಪ್ಪನವರು ನಿಷ್ಠೆ ಹಾಗೂ ಬದ್ದತೆಗೆ ಹೆಸರುವಾಸಿಯಾಗಿದ್ದರು ಎಂದು ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು. ಗೋಣಿಕೊಪ್ಪಲುವಿನ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಇವರು, ಜಪ್ಪು ಅಚ್ಚಪ್ಪನವರು ತಮ್ಮ ಜೀವಿತ ಅವಧಿ ಯಲ್ಲಿ ಸಂಘ ಪರಿವಾರ ದೊಂದಿಗೆ ಹಾಗೂ ಪಕ್ಷದೊಂದಿಗೆ ಇದ್ದಂತಹ ಒಡನಾಟದ ಬಗ್ಗೆ ವಿವರಿಸಿದರು. ರಾಷ್ಟಿçÃಯ ಸ್ವಯಂ ಸೇವಕ ಸಂಘದಲ್ಲಿ ಇವರು ತೋರಿದ ಬದ್ದತೆ ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ. ಇವರ ಅಕಾಲಿಕ ಮರಣದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್ ಜಪ್ಪು ಅಚ್ಚಪ್ಪನವರ ಆದರ್ಶ ಗುಣಗಳು ಪಕ್ಷದ ಕಾರ್ಯಕರ್ತರು ಅಳವಡಿಸಿಕೊಳ್ಳಬೇಕು. ಸಂಘ ಪರಿವಾರದ ಹಿರಿಯ ಕಾರ್ಯ ಕರ್ತರಾಗಿ ಹಾಗೂ ಪಕ್ಷ ನೀಡಿದ ಜವಾಬ್ದಾರಿಯನ್ನು ಜಪ್ಪು ಅಚ್ಚಪ್ಪ ಚಾಚೂತಪ್ಪದೆ ಪಾಲಿಸುವ ಮೂಲಕ ಉತ್ತಮವಾಗಿ ನಡೆದುಕೊಂಡಿದ್ದಾರೆ. ಸಂಘದ ಸಾಮರಸ್ಯ ವಿಭಾಗದ ಜಿಲ್ಲಾ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಅದರ್ಶ ಗುಣಗಳು ಯುವ ಜನತೆಗೆ ಮಾದರಿಯಾಗಿದೆ ಎಂದರು.
ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ, ಸರಳ ವ್ಯಕ್ತಿತ್ವಕ್ಕೆ ಹೆಸರುವಾಸಿ ಯಾದ ಜಪ್ಪು ಅವರಿಗೆ ಪಕ್ಷದ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯಿಂದ ನಿಭಾಯಿಸುತ್ತಿ ದ್ದರು. ಹಲವು ಚುನಾವಣೆಗಳಲ್ಲಿ ಪಕ್ಷ ನೀಡಿದ ಜವಾಬ್ದಾರಿಗಳನ್ನು ಬೂತ್ ಮಟ್ಟದ ತನಕ ತಾವೇ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದರು ಎಂದು ಇವರ ಗುಣಗಾನ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞಂಗಡ ಅರುಣ್ ಭೀಮಯ್ಯ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಖಜಾಂಚಿ ಚೆಪ್ಪುಡೀರ ಮಾಚು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಕೆ. ಬೋಪಣ್ಣ, ಜಿಲ್ಲಾ ಕಾರ್ಯದರ್ಶಿ ಗುಮ್ಮಟ್ಟೀರ ಕಿಲನ್ ಗಣಪತಿ, ತಾಲೂಕು ಉಪಾಧ್ಯಕ್ಷ ಚೋಡುಮಾಡ ಶ್ಯಾಮ್ ಪೂಣಚ್ಚ, ಮುಖಂಡರಾದ ಕುಟ್ಟಂಡ ಅಜಿತ್ ಕರುಂಬಯ್ಯ, ಕಾಡ್ಯಮಾಡ ಭರತ್, ಚೋಡುಮಾಡ ದಿನೇಶ್, ರಾಣಿ ನಾರಾಯಣ, ಒಬಿಸಿ ತಾಲೂಕು ಅಧ್ಯಕ್ಷ ಕೆ. ರಾಜೇಶ್, ಶಕ್ತಿ ಕೇಂದ್ರದ ಪ್ರಮುಖರಾದ ಸುರೇಶ್ ರೈ, ಜ್ಯೋತಿ ಗ್ರಾಮ ಪಂಚಾಯಿತಿ ಸದಸ್ಯರಾದ ರತಿ ಅಚ್ಚಪ್ಪ, ರಾಮಕೃಷ್ಣ, ಬಿ.ಎನ್. ಪ್ರಕಾಶ್, ಕೊಣಿಯಂಡ ಬೋಜಮ್ಮ, ಹಕೀಮ್, ಜಿ.ಕೆ. ಗೀತಾ, ಚೈತ್ರ, ಪುಷ್ಪ, ವಿವೇಕ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್ ಸ್ವಾಗತಿಸಿ ವಂದಿಸಿದರು.
-ಹೆಚ್.ಕೆ.ಜಗದೀಶ್