ಮಡಿಕೇರಿ, ಜು. ೨೭: ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣಾರ್ಥ ಸೋಮವಾರಪೇಟೆ ಪಟ್ಟಣದ ಆನೆಕೆರೆ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಪ್ರಯಾಣಿಕರ ತಂಗುದಾಣ ನಿರ್ಮಾಣ ಯೋಜನೆಗೆ ಸಂಬAಧಿಸಿದAತೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ಧಲಿಂಗ ಮಹಾಸ್ವಾಮಿಜಿಗಳು ಮಾಹಿತಿ ಪಡೆದರು. ಅರಮೇರಿ ಕಳಂಚೇರಿ ಮಠಾಧೀಶ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಶಿಡಿಗಳಲೇ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ ಹಾಜರಿದ್ದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಪ್ರಯಾಣಿಕರ ತಂಗುದಾಣ ಯೋಜನೆಯ ಮಾಹಿತಿ ನೀಡಿದರು. ಪ್ರಮುಖರಾದ ಮೃತ್ಯುಂಜಯ, ರವಿ ಮತ್ತಿತರರು ಹಾಜರಿದ್ದರು.