ಮಡಿಕೇರಿ, ಜು. ೨೭: ಮಳೆ ಹಾನಿ ಸಂಬAಧಿಸಿದAತೆ ಈಗಾಗಲೇ ಅನು ಮೋದನೆಗೊಂಡ ಹಳೇ ಕಾಮಗಾರಿ ಗಳನ್ನು ಆಗಸ್ಟ್ ೨೦ ರೊಳಗೆ ಪೂರ್ಣ ಗೊಳಿಸಬೇಕು. ಇಲ್ಲದಿದ್ದಲ್ಲಿ ತನಿಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಇಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬು ಕುಮಾರ್ ಅವರು ಎಚ್ಚರಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಾಕೃತಿಕ ವಿಕೋಪ ಮುಂಜಾಗ್ರತೆ ಹಾಗೂ ಕೋವಿಡ್ ನಿಯಂತ್ರಣ ಸಂಬAಧಿಸಿ ದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.

ಹಳೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪೂರ್ಣ ಗೊಂಡ ಕಾಮಗಾರಿಗಳಿಗೆ ಸಂಬAಧಿಸಿ ದಂತೆ ಬಿಲ್ಲನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು. ಜೊತೆಗೆ ಗುಣಮಟ್ಟದ ಕಾಮಗಾರಿ ಯನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಹಾನಿ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಭಾರೀ ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು. ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸೂಚಿಸಿ ದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಈಗಾಗಲೇ ಹಳೇ ಕಾಮಗಾರಿಗಳು ಹಾಗೂ ಪ್ರಸಕ್ತ ವರ್ಷದಲ್ಲಿ ಮಳೆಹಾನಿಗೆ ಸಂಬAಧಿಸಿ ದಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಂಗಾರು ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ ಎಂದು ಸೂಚಿಸಿದರು.

ಕೋವಿಡ್-೧೯ ಸಂಬAಧಿಸಿದAತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅವರು ಮಾತನಾಡಿ, ಕೋವಿಡ್ ಸಂಬAಧಿಸಿದAತೆ ಹೆಚ್ಚಿನ ನಿಗಾ ವಹಿಸಬೇಕು. ಪ್ರತಿದಿನ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು. ಔ಼ಷಧಿ ಸಂಬAಧಿಸಿದAತೆ ಯಾವುದೇ ರೀತಿಯ ಕೊರತೆ ಉಂಟಾಗಬಾರದು ಎಂದು ಸೂಚಿಸಿದರು.

ಜಿ.ಪಂ. ಸಿಇಓ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರಕುಮಾರ್, ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ ತಾಲೂಕು ತಹಶೀಲ್ದಾರರು ಇತರರು ಇದ್ದರು.