ಬೆಂಗಳೂರು, ಜು. ೨೬: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಸೋಮವಾರ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದರು. ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಮುಖ್ಯಮಂತ್ರಿ ಪದಗ್ರಹಣ ಮಾಡುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಮುಂದುವರೆಯುವAತೆ ಸೂಚನೆ ನೀಡಿದ್ದಾರೆ.

ಬಿಜೆಪಿ ರಾಷ್ಟಿçÃಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ತಮ್ಮ ರಾಜೀನಾಮೆ ವಿಚಾರದ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ನಾಲ್ಕನೆ ಬಾರಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ ಸನ್ನಿವೇಶ ಇಂದು ಉಂಟಾಯಿತು. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು, ‘ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಿ.ಎಸ್.ಯಡಿಯೂರಪ್ಪ ಅವರೇ ಪ್ರಕಟಿಸುತ್ತಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು. ಮುಂದಿನ ಗುರುವಾರ ಹೊಸ ಮುಖ್ಯಮಂತ್ರಿ ಪದಗ್ರಹಣ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ ಈ ಸಂಬAಧ ಸಿದ್ಧತೆಗಳು ಆರಂಭಗೊAಡಿವೆ. ಹೊಸಮುಖ, ಶುದ್ಧಹಸ್ತ ರಾಜಕಾರಣಿಗೆ ಸಿಎಂ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟç, ಗೋವಾ ಮಾದರಿಯಲ್ಲಿ ಹೊಸಬರ ಆಯ್ಕೆ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನೋಡಿಕೊಳ್ಳುವ ವೀಕ್ಷಕರಾಗಿ ನೇಮಕಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಾಧನಾ ಸಮಾವೇಶದಲ್ಲಿ ಯಡಿಯೂರಪ್ಪ ಭಾವುಕ

ಇದಕ್ಕೂ ಮುನ್ನ ಬಿಜೆಪಿ ಸಾಧನಾ ಸಮಾವೇಶದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವದಾಗಿ ಘೋಷಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ವಿಧಾನಸೌಧದ ‘ಬ್ಯಾಂಕ್ವೆಟ್ ಹಾಲ್'ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತಮ್ಮ ಭಾಷಣದ ಆರಂಭದಲ್ಲಿ ಕಾರ್ಗಿಲ್ ವಿಜಯ ದಿವಸ ಹುತಾತ್ಮರಿಗೆ ನಮನ ಸಲ್ಲಿಸಿದ್ದೇನೆ ಎಂದ ಸಿಎಂ, ನಮ್ಮೆಲ್ಲರಿಗೂ ಎದುರಾಗಿರುವ ಅಡ್ಡಿ ಆತಂಕಗಳನ್ನು ಎದುರಿಸಲು ಸೈನಿಕರು ಸ್ಫೂರ್ತಿ ಎಂದು ಅಭಿಪ್ರಾಯಪಟ್ಟರು. ಬಳಿಕ ಅವರು ಬಿಜೆಪಿ ಸಾಧನೆ ಕುರಿತು ಮಾತನಾಡಿದರು. ಸರ್ಕಾರದ ಎರಡನೇ ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ಯಡಿಯೂರಪ್ಪ ತಮ್ಮ ರಾಜಕೀಯ ಜೀವನವನ್ನು ಮೆಲುಕು ಹಾಕುತ್ತಾ ಭಾಷಣದುದ್ದಕ್ಕೂ ಭಾವುಕರಾದರು.

ಶಿಕಾರಿಪುರ ತಾಲೂಕಿನಲ್ಲಿ ಬಸವನ ಬಾಗೇವಾಡಿ, ಬಸವ ಕಲ್ಯಾಣ ಶಿವಮೊಗ್ಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆ ಮಾಡಿದೆವು. ಬೂಕನಕೆರೆಯಲ್ಲಿ ಹುಟ್ಟಿ ಶಿಕಾರಿಪುರದಲ್ಲಿ ಸಾಮಾಜಿಕ ಕಾರ್ಯ ಆರಂಭ ಮಾಡಿದೆ ಎಂದು ತಮ್ಮ ರಾಜಕೀಯ ಜೀವನದ ಏಳು ಬೀಳುಗಳನ್ನು ಸಿಎಂ ಯಡಿಯೂರಪ್ಪ ಬಿಚ್ಚಿಟ್ಟರು.

ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.

ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟಿçÃಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ, ಅವಕಾಶಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ತಿಳಿಸಿದರು.

ನಾನು ಮತ್ತು ಬೆಳ್ತಂಗಡಿಯ ವಸಂತ ಬಂಗೇರ ಅವರು ವಿಧಾನಸಭೆಗೆ ಆಯ್ಕೆಯಾದಾಗ, ವಸಂತ ಬಂಗೇರ ಅವರು ಹಠಾತ್ ಪಕ್ಷಕ್ಕೆ ಕೈಕೊಟ್ಟು ಹೊರ ಹೋದರು. ಆ ವೇಳೆ ನಾನು ಎದೆಗುಂದಲಿಲ್ಲ. ಹಿಂದಿರುಗಿ ನೋಡದೆ, ಒಬ್ಬನೇ ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಏಕಾಂಗಿ ಹೋರಾಟ ಮಾಡಿದೆ. ಆ ಮೂಲಕ ಇಂದು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಫಲನಾದೆ. (ಮೊದಲ ಪುಟದಿಂದ) ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದ ಅವರು, ಒಂದು ಕಾಲದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರದಲ್ಲಿ ಸಚಿವನಾಗೋಕೆ ನನಗೆ ಹೇಳಿದರು. ಆದರೆ ನಾನು ಅವರಿಗೆ ‘ನಾನು ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕಿದೆ. ಯಾವುದೇ ಕಾರಣಕ್ಕೂ ದಿಲ್ಲಿಗೆ ಬರೋದಿಲ್ಲ ಎಂದು ಹೇಳಿದೆ. ಆ ಸಮಯದಲ್ಲಿ ವಾಜಪೇಯಿ, ಅಡ್ವಾಣಿ, ಮುರಳಿ ಮನೋಹರ್ ಜೋಶಿ. ಇವೆರಲ್ಲ ರಾಜ್ಯ ಪ್ರವಾಸ ಮಾಡುವಾಗ ೨೦೦-೩೦೦ ಜನರು ಸೇರುತ್ತಿರಲಿಲ್ಲ. ಆಗ ಅವರೆಲ್ಲರ ಸಹಕಾರದಿಂದ ನಾಡಿನೆಲ್ಲೆಡೆ ಪ್ರವಾಸ ಮಾಡಿದೆ ಎಂದು ಭಾವುಕರಾದರು.

ಹಿಂದೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು ಎಂದು (ಮೊದಲ ಪುಟದಿಂದ) ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದ ಅವರು, ಒಂದು ಕಾಲದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರದಲ್ಲಿ ಸಚಿವನಾಗೋಕೆ ನನಗೆ ಹೇಳಿದರು. ಆದರೆ ನಾನು ಅವರಿಗೆ ‘ನಾನು ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕಿದೆ. ಯಾವುದೇ ಕಾರಣಕ್ಕೂ ದಿಲ್ಲಿಗೆ ಬರೋದಿಲ್ಲ ಎಂದು ಹೇಳಿದೆ. ಆ ಸಮಯದಲ್ಲಿ ವಾಜಪೇಯಿ, ಅಡ್ವಾಣಿ, ಮುರಳಿ ಮನೋಹರ್ ಜೋಶಿ. ಇವೆರಲ್ಲ ರಾಜ್ಯ ಪ್ರವಾಸ ಮಾಡುವಾಗ ೨೦೦-೩೦೦ ಜನರು ಸೇರುತ್ತಿರಲಿಲ್ಲ. ಆಗ ಅವರೆಲ್ಲರ ಸಹಕಾರದಿಂದ ನಾಡಿನೆಲ್ಲೆಡೆ ಪ್ರವಾಸ ಮಾಡಿದೆ ಎಂದು ಭಾವುಕರಾದರು.

ಹಿಂದೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು ಎಂದು ಎಲ್ಲ ಸಂದರ್ಭದಲ್ಲಿ ನನ್ನ ಜೊತೆ ನಿಂತಿವೆ. ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಅರ್ಪಿಸಿದರು.

ಇನ್ನು ಒಂದು ಸಂದರ್ಭದಲ್ಲಿ ಜೆಡಿಎಸ್ ಜೊತೆಗೆ ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ಮಾಡಲಾಗಿತ್ತು. ಆದರೆ ಒಪ್ಪಂದದAತೆ ಅವರು ನಡೆಯದ ಕಾರಣ ನಾನು ಸಿಎಂ ಸ್ಥಾನ ಪಡೆಯದೆ ಪಕ್ಷ ಸಂಘಟನೆ ಮಾಡಿದೆ. ಕಾಲಿಗೆ ಚಕ್ರ ಕಟ್ಟಿ ಪಕ್ಷ ಸಂಘಟನೆ ಮಾಡಿ ಅಧಿಕಾರಕ್ಕೆ ತಂದೆ. ನಾನು ಅಧಿಕಾರ ಸ್ವೀಕಾರ ಮಾಡಿದ ಬಳಿಕ ೨ ತಿಂಗಳ ಕಾಲ ಕೇಂದ್ರದಿAದ ಸಚಿವ ಸಂಪುಟ ರಚನೆಗೆ ಅವಕಾಶ ಸಿಗಲಿಲ್ಲ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಾನೊಬ್ಬನೆ ಓಡಾಡಿದೆ. ಎಲ್ಲಾ ಸಂದರ್ಭದಲ್ಲಿ ಅಗ್ನಿ ಪರೀಕ್ಷೆ ಎದುರಿಸಿದೆ. ಆದರೆ ಎಲ್ಲರ ಸಹಕಾರದಿಂದ ಕೆಲಸ ಮಾಡಿದೆ ಎಂದರು. ೭೫ ವರ್ಷ ದಾಟಿದ ಬಳಿಕವೂ ನನಗೆ ಎರಡು ವರ್ಷ ಸಿಎಂ ಆಗಿ ಮುಂದುವರೆಯಲು ಅವಕಾಶ ನೀಡಿದ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಶಬ್ದಗಳಲ್ಲಿ ಧನ್ಯವಾದ ಹೇಳಲು ಆಗುವುದಿಲ್ಲ. ಮುಂದೆಯೂ ಸ್ಥಾನ ಇದ್ದರೂ ಇಲ್ಲದೇ ಇದ್ದರೂ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು. ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಇಲ್ಲ, ರಾಜ್ಯಪಾಲ ಹುದ್ದೆ ಸ್ವೀಕರಿಸುವುದಿಲ್ಲ, ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಅಂದೇ ತಿಳಿಸಿದ್ದೇನೆ ಎಂದರು.