ಮುಳ್ಳೂರು, ಜು.೨೬: ರಾಷ್ಟçದ ಶೈಕ್ಷಣಿಕತೆ, ಆರ್ಥಿಕತೆ, ಸಾಮಾಜಿಕತೆಯ ಬಗ್ಗೆ ಪ್ರತಿಯೊಂದು ಸಾಮಾಜಿಕ ಸಂಘಟನೆ ಅರಿತುಕೊಂಡು ಸಮಾಜ ವನ್ನು ಜಾಗೃತಿಗೊಳಿಸಿದಲ್ಲಿ ದೇಶ ಅಭಿವೃದ್ಧಿಯಾಗುತ್ತದೆ ಎಂದು ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ಸಂಸ್ಥಾಪಕ ಅಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟರು. ಅವರು ಗುಡುಗಳಲೆ ಆರ್‌ವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶನಿವಾರಸಂತೆ ರೋಟರಿ ಕ್ಲಬ್‌ನ ೨೦೨೧-೨೨ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೋಟರಿ ಸಂಸ್ಥೆಯು ಕೇವಲ ಸಮಾಜ ಸೇವೆ ಮಾಡುವ ಸಂಸ್ಥೆಯಾಗಬಾರದು. ಸಂಸ್ಥೆಯ ಸದಸ್ಯರು ದೇಶದ ಸರ್ವಾಂಗೀಣ ಚಿಂತನೆಯನ್ನು ಮೈಗೂಡಿಸಿಕೊಳ್ಳ ಬೇಕಿದ್ದು, ಈ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಬೇಕೆಂದರು.

ರೋಟರಿ ಕ್ಲಬ್ ಜಿಲ್ಲಾ ಸಹಾಯಕ ರಾಜ್ಯಪಾಲ ಎಚ್.ಟಿ.ಅನಿಲ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿನ ರೋಟರಿ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ರೋಟರಿ ಸಂಸ್ಥೆ ಅತ್ಯುತ್ತಮವಾಗಿ ಸೇವೆ ಮಾಡುತ್ತಿದೆ ಎಂದರು. ಶನಿವಾರಸಂತೆ ರೋಟರಿ ಸಂಸ್ಥೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಸೇರ್ಪಡೆಗೊಳ್ಳುತ್ತಿರುವುದು ಶ್ಲಾಘನೀಯವಾಗಿದ್ದು, ಈ ನಿಟ್ಟಿನಲ್ಲಿ ಸಂಸ್ಥೆಯ ಸದಸ್ಯರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ದಿ ಪಡಿಸಬೇಕೆಂದರು.

ಪದಗ್ರಹಣ ಸಂದರ್ಭ ಶನಿವಾರಸಂತೆ ರೋಟರಿ ಕ್ಲಬಿನ ನೂತನ ಅಧ್ಯಕ್ಷ ಎಚ್.ಪಿ. ಮೋಹನ್ ಮತ್ತು ಕಾರ್ಯದರ್ಶಿ ಎಂ.ಎಸ್. ವಸಂತ್ ಅವರಿಗೆ ಅಧಿಕಾರ ಹಸ್ತಾಂತರಿಸ ಲಾಯಿತು. ಕಾರ್ಯಕ್ರಮ ದಲ್ಲಿ ರೋಟರಿ ಕ್ಲಬ್ ವಲಯ ಕಾರ್ಯದರ್ಶಿ ಎಚ್.ಎಸ್. ವಸಂತ್, ರೋಟರಿ ವಲಯ ಸೇನಾನಿ ಟಿ.ಆರ್. ಪುರುಷೋತ್ತಮ್ ಮಾತನಾಡಿದರು. ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಎಚ್.ಪಿ. ದಿವಾಕರ್, ಕಾರ್ಯದರ್ಶಿ ಎ.ಡಿ. ಮೋಹನ್‌ಕುಮಾರ್, ರೋಟರಿ ಕ್ಲಬ್ ಸದಸ್ಯರು, ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.