ಮಡಿಕೇರಿ, ಜು. ೨೮: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ಯಡಿಯೂರಪ್ಪ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭ ಕೆಲವು ತಿಂಗಳಿAದೆ ಕೊಡಗಿಗೆ ಭೇಟಿ ನೀಡಿದ್ದರು.

ಈ ಸಂದರ್ಭ ಅವರು ಮಡಿಕೇರಿಯ ಶ್ರೀ ಓಂಕಾರೇಶ್ವರ ದೇಗುಲಕ್ಕೆ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ಸಂದರ್ಭ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿದ್ದ ಪುಲಿಯಂಡ ಜಗದೀಶ್ ಅವರು ದೇವಸ್ಥಾನದ ಇತಿಹಾಸದ ಕುರಿತು ವಿವರಿಸಿದ್ದರು.