ಮಡಿಕೇರಿ, ಜು. ೨೮: ಮಡಿಕೇರಿ ನಗರ ಮಂಡಲದ ಬಿ.ಜೆ.ಪಿ. ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಿ ಸಂಘಟನೆಯಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕಾಗಿದೆ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಪಂಡ ರವಿ ಕಾಳಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಮೋರ್ಚಾಗಳು ಮತ್ತು ಪ್ರಕೋಷ್ಠಗಳ ಸಮಿತಿಗಳನ್ನು ಆದಷ್ಟು ಬೇಗ ರಚಿಸಿ ಕಾರ್ಯಪ್ರವೃತ್ತರಾಗಬೇಕಾಗಿ ಮನವಿ ಮಾಡಿಕೊಂಡರು. ನಗರ ಅಧ್ಯಕ್ಷ ಮನು ಮಂಜುನಾಥ್ ನಗರಸಭೆ ಚುನಾವಣೆಯ ನಂತರ ಇದು ಪ್ರಥಮ ಕಾರ್ಯಕ್ರಮವಾಗಿದ್ದು, ನಗರಸಭೆ ಇತಿಹಾಸದಲ್ಲಿಯೇ ೧೬ ಸೀಟುಗಳನ್ನು ಗೆಲ್ಲಲು ಕಾರಣಕರ್ತರಾದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಇನ್ನು ಮುಂದಕ್ಕೆ ನಗರದಲ್ಲಿ ಕಾರ್ಯಕ್ರಮಗಳು ಯಾವ ರೀತಿ ನಡೆಯಬೇಕೆಂದು ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ಮೂಡ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾ ಕಾರ್ಯದರ್ಶಿ ಸತೀಶ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಸುಬ್ರಮಣಿ, ಅಪ್ಪಣ್ಣ, ನಗರ ಮಂಡಲದ ಪದಾಧಿಕಾರಿಗಳು, ಎಲ್ಲ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ನಗರಸಭಾ ಸದಸ್ಯರು ಹಾಜರಿದ್ದರು.