ಮಡಿಕೇರಿ, ಜು. ೨೮: ಜಿಲ್ಲೆಯಲ್ಲಿ ಬುಧವಾರ ೮೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೬೭ ಆರ್‌ಟಿಪಿಸಿಆರ್ ಮತ್ತು ೧೬ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೩೩, ಸೋಮವಾರಪೇಟೆ ತಾಲೂಕಿನಲ್ಲಿ ೩೧, ವೀರಾಜಪೇಟೆ ತಾಲೂಕಿನಲ್ಲಿ ೧೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೧,೪೯೭ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೭೦೭ ಮಂದಿ ಗುಣಮುಖರಾಗಿದ್ದಾರೆ. ೩೯೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೯೪ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೮೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೩.೮೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.