ಮಡಿಕೇರಿ, ಜು. ೨೮: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೧೬-೧೭ನೇ ಸಾಲಿನಿಂದ ಜಾರಿಯಲ್ಲಿರುತ್ತದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕೇಂದ್ರ ಸರ್ಕಾರವು ೨೦೨೦-೨೧ನೇ ಸಾಲಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನಗೊಳಿಸಲು ತಿಳಿಸಿದೆ.

ಅದರಂತೆ ರಾಜ್ಯದಲ್ಲಿ ೨೦೨೧-೨೨ನೇ ಸಾಲಿನಲ್ಲಿಯೂ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. ೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಬೆಳೆ ವಿಮಾ ನಷ್ಟ ಪರಿಹಾರವನ್ನು ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆಯಡಿ ಇಂದಿನ ೭ ವರ್ಷಗಳ ಇಳುವರಿ ಮಾಹಿತಿಯಲ್ಲಿ ಉತ್ತಮ ೫ ವರ್ಷಗಳ ಇಳುವರಿ ಮಾಹಿತಿಯನ್ನು ಪರಿಗಣಿಸಿ ಲೆಕ್ಕಹಾಕಲಾಗುವುದು.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ಭಾರತಿ ಅಕ್ಸ ವಿಮಾ ಕಂಪೆನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಲಭ್ಯವಿದ್ದು, ಜುಲೈ ೩೧ ರೊಳಗೆ ಮಳೆಯಾಶ್ರಿತ ಮುಸುಕಿನ ಜೋಳ ಹಾಗೂ ಆಗಸ್ಟ್ ೧೬ ರೊಳಗೆ ಭತ್ತ ಬೆಳೆಗಳಿಗೆ ಈ ಯೋಜನೆಯಡಿ ಅರ್ಜಿಯನ್ನು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ್ ಭತ್ತ (ನೀರಾವರಿ) ಬೆಳೆಗೆ ರೂ. ೮೬ ಸಾವಿರ, ಭತ್ತ (ಮಳೆಯಾಶ್ರಿತ) ಬೆಳೆಗೆ ರೂ. ೫೫ ಸಾವಿರ ಹಾಗೂ ಮಳೆಯಾಶ್ರಿತ ಮುಸುಕಿನ ಜೋಳ ಬೆಳೆಗೆ ರೂ. ೫೦ ಸಾವಿರಗಳು ವಿಮಾ ಮೊತ್ತವಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಮಾ ಕಂಪೆನಿಯ ಪ್ರತಿನಿಧಿಗಳಾದ ಬೊಳ್ಳಜಿರ ಅಯ್ಯಪ್ಪ (ವೀರಾಜಪೇಟೆ ದೂ. ೯೮೮೦೭೭೮೦೪೭), ಮಂಜುನಾಥ (ಸೋಮವಾರಪೇಟೆ ದೂ. ೯೪೪೮೭೬೫೨೭೯), ಶಂಕರ್ (ಮಡಿಕೇರಿ ದೂ. ೯೫೯೦೯೨೮೮೮೬), ಹೋಬಳಿಯ ರೈತ ಸಂಪರ್ಕ ಕೇಂದ್ರ, ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬನಾ ಎಂ. ಷೇಕ್ ಅವರು ಕೋರಿದ್ದಾರೆ.