ವೀರಾಜಪೇಟೆ, ಜು. ೨೯: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಛತ್ರಕೆರೆ, ಗೌರಿಕೆರೆ, ಸುಂಕದ ಕಟ್ಟೆಯಲ್ಲಿರುವ ಪಂಪ್ಕೆರೆ ಮತ್ತು ಶಿವಕೇರಿಯ ಕೆರೆಗಳನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಪಂಚಾಯಿತಿ ಅಧಿಕಾರಿಗಳೊಂದಿಗೆ ಭೆೆÃಟಿ ನೀಡಿ ಪರಿಶೀಲನೆ ಮಾಡಿದರು.
ಬಳಿಕ ಮಾತನಾಡಿದ ಅವರು ಇರುವ ನಾಲ್ಕು ಕೆರೆಗಳನ್ನು ಸಂರಕ್ಷಿಸಬೇಕು. ಕೆರೆಗಳ ಜಾಗ ಒತ್ತುವರಿ ಆಗದಂತೆ ಎಚ್ಚರ ವಹಿಸಬೇಕು. ಮುಂದಿನ ಅನುದಾನದಲ್ಲಿ ಎಲ್ಲಾ ಕೆರೆಗಳನ್ನು ಹೂಳೆತ್ತುವ ಕಾಮಗಾರಿ ನಡೆಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಹಸಿಮೀನು ಮಾರ್ಕೆಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರಲ್ಲದೆ ವರ್ತಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಪಟ್ಟಣದಲ್ಲಿ ಅನೇಕರು ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ಒಡಾಡುತ್ತಾರೆ ಅಂತವರಿಗೆ ದಂಡ ವಸೂಲಿ ಮಾಡುವಂತೆ ತಿಳಿಸಿದರಲ್ಲದೆ, ಕೋವಿಡ್-೧೯ ಸಂದರ್ಭ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳುವಂತೆ ಹೇಳಿದರು.
ಇದೇ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುಮಾರ್, ಅಭಿಯಂತರ ಎನ್. ಹೇಮ್ಕುಮಾರ್ ಇದ್ದರು.