ಪೊನ್ನಂಪೇಟೆ, ಜು.೨೯: ಕೋವಿಡ್ ಲಾಕ್ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಗೋಣಿಕೊಪ್ಪ ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಅದ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ. ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ ೪ ರಂದು ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ ೫ ರಂದು ಚುನಾವಣೆ ನಿಗದಿಪಡಿಸಿ ವೀರಾಜಪೇಟೆ ತಾಲೂಕು ತಹಶೀಲ್ದಾರರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ.
ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ
(ಮೊದಲ ಪುಟದಿಂದ) ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ ೪ ರಂದು ಪೂರ್ವಾಹ್ನ೧೦ ರಿಂದ ೧೧ ರ ವರೆಗೆ ಸಮಯ ನಿಗದಿ ಪಡಿಸಲಾಗಿದೆ. ನಾಮಪತ್ರ ಪರಿಶೀಲನೆಗೆ ಪೂರ್ವಾಹ್ನ ೧೧ರಿಂದ ೧೧.೧೫ರವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶ ನೀಡಲಾಗಿದೆ.
ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ ೫ ರಂದು ಪೂರ್ವಾಹ್ನ ೧೦ ರಿಂದ ೧೧ ರ ವರೆಗೆ ಸಮಯ ನಿಗದಿ ಪಡಿಸಲಾಗಿದೆ. ನಾಮಪತ್ರ ಪರಿಶೀಲನೆಗೆ ಪೂರ್ವಾಹ್ನ೧೧ ರಿಂದ ೧೧.೧೫ ರವರೆಗೆ, ನಾಮಪತ್ರ ವಾಪಾಸ್ ಪಡೆಯಲು ಪೂರ್ವಾಹ್ನ ೧೧.೧೫ ರಿಂದ ೧೧.೩೦ ರ ವರೆಗೆ ಸಮಯ ನಿಗದಿಪಡಿಸಲಾಗಿದೆ. ನಾಮಪತ್ರ ವಾಪಾಸು ಪಡೆಯುವ ಪ್ರಕ್ರಿಯೆ ಮುಗಿದ ಕೂಡಲೇ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ನಡೆದ ಕೂಡಲೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸ್ಥಾನಕ್ಕೆ ಬಿಸಿಎಂ(ಎ) ಮಹಿಳೆ, ಉಪಾಧ್ಯಕ್ಷೆ ಸ್ಥಾನ ಎಸ್ಸಿ ಮಹಿಳೆ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
-ಚನ್ನನಾಯಕ