ಮಡಿಕೇರಿ, ಜು. ೨೯: ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಮೂವರು ಬಿ.ಜೆ.ಪಿ. ಶಾಸಕರುಗಳಿದ್ದು, ಇವರಲ್ಲಿ ಒಬ್ಬರಿಗೆ ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲಾಗಿದೆ.

ಈ ಕುರಿತು ಪೊನ್ನಂಪೇಟೆಯ ಕಿಗ್ಗಟ್ಟ್ನಾಡ್ ಹಿರಿಯ ನಾಗರಿಕರ ವೇದಿಕೆ ಹಾಗೂ ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಪ್ರತ್ಯೇಕವಾದ ಮನವಿ ಮೂಲಕ ಒತ್ತಾಯಮಾಡಿದೆ.

ಕಿಗ್ಗಟ್ಟ್ನಾಡ್ ಹಿತರಕ್ಷಣಾ ವೇದಿಕೆಯ ಪ್ರಮುಖರಾದ ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಚೆಕ್ಕೇರ ಸನ್ನಿ ಸುಬ್ಬಯ್ಯ ಹಾಗೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ಹಾಗೂ ಪದಾಧಿಕಾರಿಗಳು ಈ ಬಗ್ಗೆ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯವರಿಗೇ ಸಚಿವ ಸ್ಥಾನ ನೀಡುವಂತೆ ಪ್ರಧಾನಿ ಹಾಗೂ ನೂತನ ಮುಖ್ಯಮಂತ್ರಿಗಳಿಗೆ ಸಂಘಟನೆ ಮೂಲಕ ಪತ್ರವನ್ನೂ ಬರೆಯಲಾಗಿದೆ.