ಮಡಿಕೇರಿ, ಜು. ೨೯: ನಗರದ ಮಾರ್ಕೆಟ್ ಬಳಿ ನಾಯಿಗಳು ಕರುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಸ್ಥಳೀಯರು ವಿಷಯ ತಿಳಿಸಿದ ಬಳಿಕ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ಸ್ಥಳಕ್ಕೆ ಧಾವಿಸಿ ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ ಸೂಕ್ತ ಚಿಕಿತ್ಸೆಯನ್ನು ಕೊಡಿಸಿದರು. ನಗರಸಭಾ ಸದಸ್ಯ ಅರುಣ್ ಶೆಟ್ಟಿ ನಾಯಿಗಳ ಹಾವಳಿ ತಡೆಗೆ ಎಲ್ಲಾ ವಾರ್ಡ್ಗಳಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಪೌರಾಯುಕ್ತರ ಬಳಿ ಮನವಿ ಮಾಡಿದರು.