ಮಡಿಕೇರಿ, ಜು. ೨೯: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ ೨೦೨೦ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗೆ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ೨೦೨೦ರ ಜನವರಿ ೧ ರಿಂದ ೨೦೨೦ರ ಡಿಸೆಂಬರ್ ೩೧ ರೊಳಗೆ ಪ್ರಥಮ ಆವೃತ್ತಿಯಲ್ಲಿ ಪ್ರಕಟವಾಗಿರುವ ಕೃತಿಯಾಗಿರಬೇಕು. ಮತ್ತು ಕೃತಿಯಲ್ಲಿ ಮುದ್ರಣ ೨೦೨೦ ಎಂದು ಮುದ್ರಿತವಾಗಿರಬೇಕು.
ಕಾವ್ಯ (ವಚನಗಳು ಮತ್ತು ಹನಿಗವನಗಳು) ನವಕವಿಗಳ ಪ್ರಥಮ ಕವನ ಸಂಕಲನ (ದೃಢೀಕರಣ ಪತ್ರದೊಂದಿಗೆ) ಕಾವ್ಯ ಹಸ್ತಪ್ರತಿ (೩೦ ವರ್ಷ ಒಳಗಿನ ಯುವ ಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ) ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಕ್ಕಾಗಿ), ಸಣ್ಣಕತೆ, ನಾಟಕ ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ವಿ. ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ) ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕತೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ).
ಸಾಹಿತ್ಯ ವಿಮರ್ಶೆ-ಸಾಹಿತ್ಯ ಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ) ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) ಮಕ್ಕಳ ಸಾಹಿತ್ಯ ವಿಜ್ಞಾನ ಸಾಹಿತ್ಯ-(ಭೌತ, ರಾಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿAಗ್, ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ).
ಮಾನವಿಕ-(ಜಾನಪದ, ಇತಿಹಾಸ, ರಾಜಕೀಯ ಶಾಸ್ತç, ಸಮಾಜಶಾಸ್ತç, ಮಾನವ ಶಾಸ್ತç, ಮನಃಶಾಸ್ತç, ಭಾಷಾಶಾಸ್ತç, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭAಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ) ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬAಧಿಸಿದ ಸಂಶೋಧನೆ) ವೈಚಾರಿಕ/ ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ.ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗೆ) ಅನುವಾದ-೧-ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿಗಳು (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಎಲ್.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿದಿ ಬಹುಮಾನಗಳಿಗಾಗಿ) ಅನುವಾದ-೨ - ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿ ಲೇಖಕರ ಮೊದಲ ಸ್ವತಂತ್ರ ಕೃತಿ-೨೦೨೦ ರಲ್ಲಿ ಮೊದಲು ಮುದ್ರಣಗೊಂಡ ಸ್ವತಂತ್ರ ಕೃತಿ. ಖಾತರಿಪಡಿಸಲು ದೃಡೀಕರಣ ಪತ್ರ ಲಗತ್ತಿಸಬೇಕು (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) ಕನ್ನಡದಿಂದ ಇಂಗ್ಲೀಷ್ ಅನುವಾದ ಅಮೇರಿ ಕನ್ನಡ ದತ್ತಿನಿದಿ ಬಹುಮಾನಗಳಿಗಾಗಿ) ದಾಸ ಸಾಹಿತ್ಯ- ದಾಸ ಸಾಹಿತ್ಯ ಕುರಿತ ಸೃಜನ/ ಸೃಜನೇತರ ಕೃತಿಗಳು (ಶ್ರೀಮತಿ ಜಲಜಾ ಶ್ರೀಪತಿ ಆಚರ್ಯ ಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ) ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು) ಬಹುಮಾನಕ್ಕೆ ಅರ್ಹವಾಗಿರುವ ಕೃತಿಗಳಾಗಿವೆ.
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರು ಮುದ್ರಣವಾದ ಕೃತಿಗಳಾಗಿರಬಾರದು, ಪಿಎಚ್ಡಿ ಪದವಿಗಾಗಿ ಸಿದ್ದಪಡಿಸಿದ ಸಂಶೋಧನಾ ಗ್ರಂಥಗಳಾಗಿರಬಾರದು, ಪಠ್ಯ ಪುಸ್ತಕಗಳಾಗಿರಬಾರದು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳಾಗಿರಬಾರದು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾರದು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೆ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ, ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರದಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.
ಅರ್ಜಿ ಸಲ್ಲಿಸಲು ತಲಾ ೪ ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ರಿಜಿಸ್ಟರ್ಡ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ೨೦೨೧ ರ ಸೆಪ್ಟೆಂಬರ್ ೧೫ ರೊಳಗೆ ತಲುಪಿಸಲು ತಿಳಿಸಿದೆ. ಕಳುಹಿಸಲ್ಪಡುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಎನ್. ಕರಿಯಪ್ಪ ತಿಳಿಸಿದ್ದಾರೆ.