ಮಡಿಕೇರಿ, ಜು. ೨೯: ಯೋಧ ಹಾಗೂ ಅವರ ಕುಟುಂಬದವರ ಮೇಲಿನ ಹಲ್ಲೆಯನ್ನು ನಿವೃತ್ತ ಪೊಲೀಸರ ಸಂಘ ಖಂಡಿಸಿದ್ದು, ಈ ಸಂಬAಧ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ನೀಡಲಿದೆ. ಅಲ್ಲದೆ, ಪ್ರತಿಭಟನೆಯಲ್ಲಿ ನಿವೃತ್ತ ಪೊಲೀಸರು ಭಾಗಿಯಾಗಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಂ.ಎ. ಅಪ್ಪಯ್ಯ ತಿಳಿಸಿದ್ದಾರೆ.
ಮಡಿಕೇರಿ ಕೊಡವ ಸಮಾಜ
* ಯೋಧ ಹಾಗೂ ಕುಟುಂಬದ ಮೇಲಿನ ಹಲ್ಲೆ ಪ್ರಕರಣ ಅಕ್ಷಮ್ಯ ಅಪರಾಧವಾಗಿದ್ದು, ಮಡಿಕೇರಿ ಕೊಡವ ಸಮಾಜ ಇದನ್ನು ಖಂಡಿಸುತ್ತದೆ ಎಂದು ಸಮಾಜದ ಪ್ರಮುಖರು ತಿಳಿಸಿದ್ದಾರೆ. ಇದರ ವಿರುದ್ಧವಾಗಿ ತಾ. ೩೦ ರಂದು ನಡೆಯಲಿರುವ ಪ್ರತಿಭಟನೆಗೆ ಸಮಾಜ ಬೆಂಬಲ ನೀಡಲಿದೆ ಎಂದು ಅವರುಗಳು ತಿಳಿಸಿದ್ದಾರೆ.
ಕೊಡಗು ಗೌಡ ಫೆಡರೇಶನ್
* ಶಾಂತಿಯುತ ಜೀವನ ನಡೆಸುವ ಕೊಡಗಿನ ಮಣ್ಣಿನಲ್ಲಿ ದೇಶಕ್ಕಾಗಿ ಜೀವನ್ಮರಣವನ್ನೂ ಲೆಕ್ಕಿಸದೆ ದುಡಿಯುವ ಸೈನಿಕನೊಬ್ಬ ಸಂಸಾರದೊAದಿಗೆ ಕೆಲವು ದಿವಸ ಕಳೆಯಲು ರಜೆಯ ಮೇಲೆ ಬಂದಾಗ ಕ್ಷುಲ್ಲಕ ಕಾರಣಗಳಿಗೆ ಕೆಲವರು ಆತನ ಮತ್ತು ಆತನ ಪೋಷಕರ ಮೇಲೆ ಹಲ್ಲೆ ನಡೆಸಿ ಆತನಿಗೆ ಮಾಡಿದ ನೋವು ಹಾಗೂ ಅವಮಾನ ಖಂಡನೀಯ. ತಾ. ೩೦ ರಂದು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಕೊಡಗು ಗೌಡ ಫೆಡರೇಶನ್ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ.
ಹಿಂದೂ ಮಲಯಾಳಿ ಸಂಘ
* ಭಾರತೀಯ ಸೇನೆಯ ಯೋಧ ಮತ್ತವರ ಕುಟುಂಬ ವರ್ಗದ ಮೇಲಿನ ಹಲ್ಲೆ ಖಂಡಿಸಿ ನಡೆಯುವ ಪ್ರತಿಭಟನೆಗೆ ಹಿಂದೂ ಮಲಯಾಳಿ ಸಂಘ ಬೆಂಬಲ ಸೂಚಿಸಿದೆ. ಶುಕ್ರವಾರ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಸಂಘವು ಸಂಪೂರ್ಣ ಬೆಂಬಲ ನೀಡಲಿದ್ದು, ಪ್ರತಿಭಟನೆಯಲ್ಲ್ಲಿ ಭಾಗವಹಿಸುವ ಮೂಲಕ ಭಯೋತ್ಪಾದನಾ ಕೃತ್ಯವನ್ನು ಖಂಡಿಸಲಿದೆ ಎಂದು ಅಧ್ಯಕ್ಷ ಕೆ.ಎಸ್.ರಮೇಶ್, ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ತಿಳಿಸಿದ್ದಾರೆ.
ವೀರಾಜಪೇಟೆ ಮಾಜಿ ಸೈನಿಕರ ಸಹಕಾರ ಸಂಘ
* ಕರ್ತವ್ಯನಿರತ ಯೋಧ ಹಾಗೂ ಆತನ ಕುಟುಂಬದ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಸಂಘಟನೆ, ಸಂಘ-ಸAಸ್ಥೆಗಳು ತಾ. ೩೦ ರಂದು (ಇಂದು) ಮಡಿಕೇರಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಯೋಧರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಕೈಜೋಡಿಸಬೇಕು ಎಂದು ವೀರಾಜಪೇಟೆ ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್ ನಂಜಪ್ಪ ಹೇಳಿದರು.
ವೀರಾಜಪೇಟೆ ಕೊಡವ ಸಮಾಜ ಹಾಗೂ ಮಾಜಿ ಸೈನಿಕರ ಸಹಕಾರ ಸಂಘದಿAದ ಕರೆಯಲಾಗಿದ್ದ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯನ್ನು ಖಂಡಿಸಿ ತಾ. ೩೦ ರಂದು ಮಡಿಕೇರಿಯಲ್ಲಿ ನಡೆಯುವ ಪ್ರತಿಭಟನೆಗೆ ಬೆಂಬಲ ನೀಡುತ್ತಿರುವುದಾಗಿ ತಿಳಿಸಿದರು. ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಮಾಜಿ ಯೋಧ ಕುಯಿಮಂಡ ಕಿರಣ್ ಮಾತನಾಡಿ, ಇನ್ನು ಈ ರೀತಿಯ ಪ್ರಕರಣ ನಡೆಯದಂತೆ ಕಠಿಣ ಕ್ರಮ ಕೈ ಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.
ಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಚಪ್ಪಂಡ ಹರೀಶ್, ಕೊಡವ ಸಮಾಜ ಆಡಳಿತ ಮಂಡಳಿ ನಿರ್ದೇಶಕಿ ಆಶಾ ಸುಬ್ಬಯ್ಯ, ನಿರ್ದೇಶಕ ಕೂತಂಡ ಅಪ್ಪಯ್ಯ ಉಪಸ್ಥಿತರಿದ್ದರು.
ಮೂರ್ನಾಡು ಸಮಾಜ
* ಮೂರ್ನಾಡು ಕೊಡವ ಸಮಾಜವು ಘಟನೆಯನ್ನು ಖಂಡಿಸುತ್ತದೆ. ಇದರೊಂದಿಗೆ ತಾ. ೩೦ ರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಮಾಜದ ಅಧ್ಯಕ್ಷ ನೆರವಂಡ ಅನೂಪ್ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಪೊನ್ನಂಪೇಟೆ ಕೊಡವ ಸಮಾಜ
* ಸೈನಿಕ ಕುಟುಂಬದ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಪೊನ್ನಂಪೇಟೆ ಕೊಡವ ಸಮಾಜ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ಈ ಹಲ್ಲೆ ಪ್ರಕರಣದಲ್ಲಿ ಭಾಗವಹಿಸಿರುವ ಎಲ್ಲಾ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಸಮಾಜದ ಅಧ್ಯಕ್ಷ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಆಗ್ರಹಿಸಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ
* ಮಡಿಕೇರಿ ಸಮೀಪದ ಬೋಯಿಕೇರಿಯಲ್ಲಿ ನಡೆದ ಯೋಧ ಅಶೋಕ್ಕುಮಾರ್ ಹಾಗೂ ಕುಟುಂಬದವರ ಮೇಲಿನ ಹಲ್ಲೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ಕೃತ್ಯದಲ್ಲಿ ಭಾಗಿಯಾದ ಉಳಿದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸೋಮವಾರಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ವಕ್ತಾರ ಎಸ್.ಎನ್. ರಘು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಬಿ.ಜೆ. ದೀಪಕ್, ಪ.ಪಂ. ಸದಸ್ಯರುಗಳಾದ ಪಿ.ಕೆ. ಚಂದ್ರು, ಬಿ.ಆರ್. ಮಹೇಶ್ ಅವರುಗಳು ಉಪಸ್ಥಿತರಿದ್ದರು.
ಕೊಡಗು ಯುವ ಸೇನೆ
* ಅಪಘಾತದ ನೆಪದಲ್ಲಿ ಸೈನಿಕರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿರುವುದನ್ನು ಕೊಡಗು ಯುವ ಸೇನೆ ಖಂಡಿಸಿದ್ದು, ವೀರಾಜಪೇಟೆ ತಹಶೀಲ್ದಾರ್ ಮುಖಾಂತರ ಜಿಲ್ಲಾ ಆಡಳಿತಕ್ಕೆ ಮನವಿ ಸಲ್ಲಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಯುವ ಸೇನೆಯ ಜಿಲ್ಲಾ ಪ್ರಮುಖ ಕುಲದೀಪ್ ಪೂಣಚ್ಚ, ಜಿಲ್ಲಾ ಸಂಚಾಲಕ ಮಾಚೆಟ್ಟಿರ ಸಚಿನ್ ಮಂದಣ್ಣ, ವೀರಾಜಪೇಟೆ ತಾಲೂಕು ಅಧ್ಯಕ್ಷ ಸಿ.ಎಸ್. ಪೊನ್ನಣ್ಣ ನಗರಾಧ್ಯಕ್ಷ ಟಿ.P.ೆ ನಾಣಯ್ಯ ಹಾಗೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ನಡೆಯುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಬಿಜೆಪಿ ಸಮಿತಿ
* ಅಪಘಾತವನ್ನು ನೆಪ ಮಾಡಿಕೊಂಡು ಯೋಧರ ಕುಟುಂಬದ ಮೇಲೆ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆAದು ಸುಂಟಿಕೊಪ್ಪ ಬಿಜೆಪಿ ಸ್ಥಾಯಿ ಸಮಿತಿ ಒತ್ತಾಯಿಸಿದೆ. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸುಂಟಿಕೊಪ್ಪ ಬಿಜೆಪಿ ಸ್ಥಾಯಿ ಸಮಿತಿ ಎಚ್ಚರಿಸಿದೆ.
ದೇಶದ ಗಡಿ ಕಾಯುವ ಯೋಧನ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಕೂಲಂಕಶವಾಗಿ ತನಿಖೆ ನಡೆಸಿ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸುವAತೆ ಸುಂಟಿಕೊಪ್ಪ ಶಕ್ತಿ ಕೇಂದ್ರದ ಪ್ರಮುಖರಾದ ಬಿ.ಕೆ. ಪ್ರಶಾಂತ್, ವಾಸುದೇವ್, ಸಹಪ್ರಮುಖ್ ಪ್ರಶಾಂತ್, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಹಿಂದುಳಿದ ವರ್ಗಗಳ ಅಧ್ಯಕ್ಷ ಸಿ.ಸಿ. ಸುನಿಲ್ ಇತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಸೋಮವಾರಪೇಟೆ ಮಂಡಲ
* ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಯೋಧನೊಂದಿಗೆ ವಾಹನದಲ್ಲಿದ್ದ ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿರುವುದು ನಿಜಕ್ಕೂ ಖಂಡನೀಯ ಇಂತವರ ಪರ ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ನ ರಾಜಕೀಯ ಮುಖಂಡರು ನಿಂತಿರುವುದು ನಾಚಿಗೆಗೇಡಿನ ವಿಷಯವಾಗಿದೆ. ಎಂದು ಬಿಜೆಪಿ ಸೋಮವಾರಪೇಟೆ ಮಂಡಲ ವಕ್ತಾರ ಕೆ. ಜಿ. ಮನು ಹೇಳಿದ್ದಾರೆ.
ಮುಳ್ಳುಸೋಗೆ - ಕೂಡುಮಂಗಳೂರು ಬಿಜೆಪಿ
*ದಾಳಿ ಪ್ರಕರಣವನ್ನು ಮುಳ್ಳುಸೋಗೆ ಮತ್ತು ಕೂಡುಮಂಗಳೂರು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಸದಸ್ಯರು ಘಟನೆಯನ್ನು ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಗಣಿ ಪ್ರಸಾದ್ ಕ್ಷುಲ್ಲಕ ಕಾರಣಕ್ಕೆ ಸೈನಿಕನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಚಿನ್ನಾಭರಣಗಳನ್ನು ದರೋಡೆ ಮಾಡಿರುವುದು ಖಂಡನೀಯ ಎಂದರು. ಈ ಸಂಬAಧ ಉನ್ನತ ಮಟ್ಟದ ತನಿಖೆ ನಡೆಸಬೇಕಾಗಿದೆ ಎಂದರು ಸುದ್ದಿಗೋಷ್ಠಿಯಲ್ಲಿ ಮುಳ್ಳುಸೋಗೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಬಿ ಗಣೇಶ್, ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಬಿ.ವಿ. ಪ್ರವೀಣ್, ಮುಳ್ಳುಸೋಗೆ ಗ್ರಾ.ಪಂ ಅಧ್ಯಕ್ಷ ಬಿ.ಕೆ ಚೆಲುವರಾಜ್ ಹಾಜರಿದ್ದರು.