ಮಡಿಕೇರಿ, ಜು.೨೯: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಂಬAಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸು ತ್ತಿರುವ ಒಂದು ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೦೬ ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ೦೧ ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು ೦೭ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ (ಲಗತ್ತಿಸುವ ದಾಖಲೆಗಳಿದ್ದಲ್ಲಿ ವಿವರಗಳನ್ನು ಸಂಕ್ಷಿಪ್ತವಾಗಿ ಅರ್ಜಿಯಲ್ಲಿ ವಿವರಿಸಬೇಕು) ಆಗಸ್ಟ್, ೨೧ ರ ಸಂಜೆ ೪ ಗಂಟೆಯೊಳಗೆ ಕಚೇರಿಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ:೦೮೨೭೨ ೨೯೫೮೨೯ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.