ಮಡಿಕೇರಿ, ಜು. ೩೧: ಬಿಳಿಗೇರಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ತಾ. ೧ರಂದು (ಇಂದು) ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ.

ತುಂತಜಿರ ಚಂದ್ರಶೇಖರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಕ್ರಿಕೆಟ್, ಓಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದು ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.