ಮಡಿಕೇರಿ, ಜು. ೩೧: ಇತ್ತೀಚಿಗೆ ಬೋಯಿಕೇರಿ ಬಳಿ ಯೋಧನ ಕುಟುಂಬದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾಂಗ್ರೆಸ್ ಸತ್ಯಾಸತ್ಯತೆ ಅರಿಯದೆ ಏಕಪಕ್ಷೀಯವಾಗಿ ನಡೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ನ ಅಲ್ಪಸಂಖ್ಯಾತ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಈ ಬಗ್ಗೆ ಕೆಲವರು ಪ್ರಸ್ತಾಪಿಸಿದ್ದು, ಎಂ.ಎಲ್.ಸಿ. ವೀಣಾ ಅಚ್ಚಯ್ಯ ಸತ್ಯಾಂಶ ತಿಳಿಯದೆ ಏಕಪಕ್ಷೀಯ ಹೇಳಿಕೆ ನೀಡಿದ್ದಾರೆ ಎಂದು ಅವರ ಎದುರಲ್ಲೇ ಆಕ್ರೋಶ ಹೊರಹಾಕಿದ್ದಾರೆ.
ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ, ಪರಸ್ಪರ ನಾಯಕರ ನಡುವೆ ವಾಗ್ವಾದ ಸೃಷ್ಟಿಯಾಗಿದೆ. ಇದೀಗ ವಾಗ್ವಾದದ ವೀಡಿಯೋ ವೈರಲ್ ಆಗಿದ್ದು, ಪಕ್ಷದೊಳಗಿನ ಬೇಗುದಿ ಬಹಿರಂಗವಾಗಿದೆ.
ರಾಜ್ಯ ವರಿಷ್ಠರ ಗಮನಕ್ಕೆ
ವಾಗ್ವಾದಕ್ಕೆ ಸಂಬAಧಿಸಿದ ವೀಡಿಯೋ ವೈರಲ್ ಆಗಿರುವುದು ರಾಜ್ಯ ವರಿಷ್ಠರ ಗಮನಕ್ಕೆ ಬಂದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ‘ಶಕ್ತಿ’ಗೆ ತಿಳಿಸಿದ್ದಾರೆ.
ಘಟನೆ ಸಂಬAಧ ಮಾತನಾಡಿರುವ ಅವರು, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿರುವುದು ಸಹಜ. ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕೆಲವರು ಪ್ರಶ್ನಿಸಿದ್ದಾರೆ. ಇದು ತಾ.೩೧ ರಂದು ಮೈಸೂರಿನಲ್ಲಿ ನಡೆದ ಸಭೆಯಲ್ಲಿಯೂ ಪ್ರಸ್ತಾಪವಾಗಿದೆ.
ಪಕ್ಷದೊಳಗಿರಬೇಕಾದ ವಿಚಾರವನ್ನು ವೀಡಿಯೋ ಮಾಡಿ ವೈರಲ್ ಮಾಡಿರುವುದಕ್ಕೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ಸಭೆಯಲ್ಲಿನ ಗೊಂದಲವನ್ನು ಅಲ್ಲಿಯೇ ಪರಿಹರಿಸಲಾಗಿದೆ ಎಂದು ಧರ್ಮಜ ತಿಳಿಸಿದ್ದಾರೆ.