ಮಡಿಕೇರಿ, ಜು. ೩೧: ಮಡಿಕೇರಿ- ಮಂಗಳೂರು ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಭೂಕುಸಿತದಿಂದ ರಸ್ತೆಗೆ ಹಾನಿಯಾಗುತ್ತಿದೆ. ಈ ನಡುವೆ ೨ನೇ ಮೊಣ್ಣಂಗೇರಿ ಸಮೀಪ ನಿರ್ಮಾಣವಾಗಿದ್ದ ರಸ್ತೆ ಮಧ್ಯೆಯೆ ಬಿರುಕು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ತಜ್ಞರನ್ನು ಕರೆಯಿಸಿ ಮಣ್ಣು ಪರೀಕ್ಷೆ ಕೈಗೊಂಡು ಇದಕ್ಕೆ ಕಾರಣವೇನು ಎಂಬ ಬಗ್ಗೆ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದರು.

ಮಂಗಳೂರು ಹೆದ್ದಾರಿಯಲ್ಲಿ ರಸ್ತೆ ಬಿರುಕು ಬಿಟ್ಟ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ೨೦೧೮ರಿಂದ ಸತತವಾಗಿ ಕೊಡಗಿನಲ್ಲಿ ಮಳೆಯಿಂದಾಗಿ ಭೂಕುಸಿತದೊಂದಿಗೆ ಹೆದ್ದಾರಿಗೂ ಹಾನಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಮಡಿಕೇರಿಯಿಂದ ಸಂಪಾಜೆವರೆಗೆ ೧೮ ತಡೆಗೋಡೆಗಳನ್ನು ನಿರ್ಮಿಸಲು ಮುಂದಾಗಿದ್ದೆವು. ಆದರೆ ಜೂನ್‌ನಲ್ಲಿ ಬಿದ್ದ ಮಳೆಯಿಂದಾಗಿ ಇನ್ನು ಕೆಲವೆಡೆ ಕುಸಿತ ಆಗುವ ಸಾಧ್ಯತೆ ಕಂಡುಬAದ ಹಿನ್ನೆಲೆಯಲ್ಲಿ ಶಾಸಕ ಬೋಪಯ್ಯ ಅವರ ಸಲಹೆಯಂತೆ ಈ ಬಗ್ಗೆ ಪರಿಶೀಲನೆ ನಡೆಸಿ ಇದೀಗ ೨೨ ಕಡೆ ತಡೆಗೋಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಯೋಧನ ಮನೆಗೆ ಭೇಟಿ

ಇತ್ತೀಚೆಗೆ ಬೋಯಿಕೇರಿ ಬಳಿ ಹಲ್ಲೆಗೊಳಗಾಗಿದ್ದ ಯೋಧ ಅಶೋಕ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಂಸದ ಪ್ರತಾಪ್ ಸಿಂಹ ಅಶೋಕ್ ಕುಮಾರ್ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡುವ ಭರವಸೆ ನೀಡಿ, ಧೈರ್ಯ ತುಂಬಿದರು. ಹಲ್ಲೆ ಪ್ರಕರಣ ಸಂಬAಧ ಸಮಗ್ರ ತನಿಖೆ ಕೈಗೊಂಡು ಕೃತ್ಯದಲ್ಲಿ ಭಾಗಿಯಾದ ಎಲ್ಲರ ಮೇಲೂ ಕ್ರಮಕೈಗೊಳ್ಳಲು ಸಂಬAಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಚಿವ ಸ್ಥಾನದ ವಿಶ್ವಾಸವಿದೆ

ಕೊಡಗು ಪುಟ್ಟ ಜಿಲ್ಲೆಯಾದರೂ ರಾಷ್ಟಿçÃಯತೆಯನ್ನು ಪ್ರತಿಪಾದಿಸುವಂತಹ ಪ್ರಮುಖ ಜಿಲ್ಲೆಯಾಗಿದೆ. ಇಲ್ಲಿನ ಶಾಸಕರಾದ ಕೆ.ಜಿ. ಬೋಪಯ್ಯ ವಿಧಾನಸಭಾಧ್ಯಕ್ಷರಾಗಿ ಅನುಭವ ಹೊಂದಿದವರಾಗಿದ್ದು, ಅಪ್ಪಚ್ಚು ರಂಜನ್ ಅವರೂ ಕೂಡ ಸಚಿವರಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ. ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಸಂಪೂರ್ಣ ಬೆಂಬಲ ನೀಡುವ ಜಿಲ್ಲೆಯಾಗಿರುವ ಕೊಡಗಿಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎಂಬ ಖಚಿತ ವಿಶ್ವಾಸ ತನಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಈ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ, ನಗರಸಭಾ ಸದಸ್ಯರುಗಳಾದ ಉಮೇಶ್ ಸುಬ್ರಮಣಿ, ಅಪ್ಪಣ್ಣ, ರಾಷ್ಟಿçÃಯ ಹೆದ್ದಾರಿ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಜಿ.ಎನ್. ಹೆಗ್ಡೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಮತ್ತಿತರರು ಇದ್ದರು.