ಮಡಿಕೇರಿ, ಜು. ೩೧: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಕೊಡಗು-ಕೇರಳ ಗಡಿಯಲ್ಲಿ ಸೂಕ್ತ ಮುಂಜಾಗ್ರತೆ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಕೊಡಗು ಸೇರಿದಂತೆ ೫ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ, ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಕೇರಳ ಗಡಿಯಲ್ಲಿ ಬಿಗಿಕ್ರಮಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಲಸಿಕೆ ದೃಢೀಕರಣ ಇಲ್ಲದಿದ್ದರೆ ೭೨ ಗಂಟೆಯೊಳಗಿನ ಕೊರೊನಾ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ವರದಿ ತೋರಿಸಿ ಜಿಲ್ಲೆಯನ್ನು ಪ್ರವೇಶಿಸಬೇಕಾಗಿದೆ. ಜಿಲ್ಲೆಯ ಮೂರು ಕಡೆಗಳಲ್ಲಿ ಚೆಕ್‌ಪೋಸ್ಟ್ಗಳಿವೆ. ಅಂತರಜಿಲ್ಲೆಯಿAದ ಬರುವವರನ್ನು ಪರಿಶೀಲನೆ ಮಾಡಲಾಗುತ್ತಿದೆ. ಜೊತೆಯಲ್ಲಿ ಚೆಕ್‌ಪೋಸ್ಟ್ನಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆ ಮಾಡಲು ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಟೇಲ್, ರೆಸಾರ್ಟ್, ಹೋಂಸ್ಟೇಯಲ್ಲಿ ತಂಗುವ ಪ್ರವಾಸಿಗರಿಗೆ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆ ಮಾಡಲು ಸೂಚಿಸಿದ್ದು, ಆದೇಶದ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.