ಸೋಮವಾರಪೇಟೆ, ಆ. ೨: ಕರ್ನಾಟಕ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಬಿ.ವಿ. ರವಿ ಅವರನ್ನು ಆಯ್ಕೆಮಾಡಲಾಗಿದೆ.
ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್. ಮಂಜುನಾಥ್, ಉಪಾಧ್ಯಕ್ಷರಾಗಿ ಉಮೇಶ್, ಸಹ ಕಾರ್ಯದರ್ಶಿಯಾಗಿ ರಾಘವೇಂದ್ರ, ಖಜಾಂಚಿಯಾಗಿ ಕೆ.ಎನ್. ದೀಪಕ್ ಅವರುಗಳನ್ನು ನೇಮಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ವಿನ್ಸೆಂಟ್ ಬಾಬು, ಉಪಾಧ್ಯಕ್ಷ ಪರಶುರಾಮ್, ಪ್ರಧಾನ ಕಾರ್ಯದರ್ಶಿ ರಖೀಬ್, ಸಹ ಕಾರ್ಯದರ್ಶಿ ಕಿರಣ್ ಸೇರಿದಂತೆ ಇತರರು ಈ ಸಂದರ್ಭ ಉಪಸ್ಥಿತರಿದ್ದರು.