ಮಡಿಕೇರಿ, ಆ. ೨: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಜಿಲ್ಲೆಗೆ ಹೊಂದಿಕೊAಡಿರುವ ಕೇರಳ ರಾಜ್ಯದಲ್ಲಿ ಕೋವಿಡ್ -೧೯ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು, ಕೊಡಗು ಜಿಲ್ಲೆಯ ಗಡಿಭಾಗದ ಪ್ರದೇಶಗಳಲ್ಲಿ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ -೧೯ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ರಡಿ ಮತ್ತು ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ ೨೦೦೫ರಡಿ ಹಾಗೂ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೊಡಗು ಜಿಲ್ಲೆಗೆ ಹೊಂದಿಕೊAಡಿರುವ ಕೇರಳ ರಾಜ್ಯದ ಜಿಲ್ಲೆಯ ಗಡಿಭಾಗದ ೫ ಕಿಲೋಮೀಟರ್ (ಕುಟ್ಟ ಮತ್ತು ಕರಿಕೆ) ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್, ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫, ಭಾರತ ದಂಡ ಸಂಹಿತೆ ಕಲಂ ೧೮೮ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ೨೦೨೦ರನ್ವಯ ದಂಡನೀಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.