ಮಡಿಕೇರಿ, ಆ. ೨: ಜಿಲ್ಲೆಯಲ್ಲಿ ಸೋಮವಾರ ೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೭ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೪, ವೀರಾಜಪೇಟೆ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೧,೮೨೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೯೬೨ ಮಂದಿ ಗುಣಮುಖ ರಾಗಿದ್ದಾರೆ. ೪೬೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೯೮ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೯೨ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೨೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.