ಸಿದ್ದಾಪುರ, ಆ. ೨: ೨೦೨೦-೨೧ ನೇ ಸಾಲಿನಲ್ಲಿ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚು ಕಾಮಗಾರಿ ಮಾಡಿಸಿರುವ ಹಿನ್ನೆಲೆಯಲ್ಲಿ ಜಿ.ಪಂ ವತಿಯಿಂದ ನೆಲ್ಯಹುದಿಕೇರಿ ಗ್ರಾ.ಪಂ ಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಂಚಾಯತ್ ರಾಜ್ ದಿನದ ಅಂಗವಾಗಿ ಕುಶಾಲನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹೆಚ್.ಎಸ್ ಅನಿಲ್ ಕುಮಾರ್ ಅವರು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಉಪ ಕಾರ್ಯದರ್ಶಿಗಳು ಹಾಗೂ ತಾಲೂಕು ಕಾರ್ಯನಿರ್ವ ಹಣಾಧಿ ಕಾರಿಗಳ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು. ಜಿಲ್ಲೆಯ ೧೦೪ ಪಂಚಾಯಿತಿಗಳ ಪೈಕಿ ನೆಲ್ಯಹುದಿಕೇರಿ ಗ್ರಾ.ಪಂ ಪ್ರಗತಿಯಲ್ಲಿ ಎರಡನೇ ಸ್ಥಾನವನ್ನು ಪಡೆದು ಕೊಂಡಿರುತ್ತದೆ. ಈ ಹಿಂದೆ ಕೂಡ ಉದ್ಯೋಗಖಾತ್ರಿ ಯೋಜನೆ ಯಡಿಯಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ. ಪಿಡಿಓ ಅನಿಲ್ಕುಮಾರ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. -ವಾಸು ಎ.ಎನ್.