ಕುಶಾಲನಗರ, ಆ.೨: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಪಡಿಸಿ ಮಾರಕ ಆಯುಧಗಳಿಂದ ಹಲ್ಲೆ ಮಾಡುವ ಮೂಲಕ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಘಟನೆ ಕುಶಾಲನಗರದಲ್ಲಿ ಭಾನುವಾರ ತಡ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಬೈಕ್ ಸವಾರರು ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ಕಾರನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯ ಘಟನೆಗೆ ಕಾರಣ ಎನ್ನಲಾಗಿದೆ.

ಭಾನುವಾರ ರಾತ್ರಿವೇಳೆ ಕುಶಾಲನಗರ ಮಾರುಕಟ್ಟೆ ರಸ್ತೆಯಲ್ಲಿ ಈ ಕೃತ್ಯ ನಡೆದಿದೆ, ಕೊಪ್ಪ ಕಡೆಯಿಂದ ಕುಶಾಲನಗರ, ಆ.೨: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಪಡಿಸಿ ಮಾರಕ ಆಯುಧಗಳಿಂದ ಹಲ್ಲೆ ಮಾಡುವ ಮೂಲಕ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಘಟನೆ ಕುಶಾಲನಗರದಲ್ಲಿ ಭಾನುವಾರ ತಡ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಬೈಕ್ ಸವಾರರು ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ಕಾರನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯ ಘಟನೆಗೆ ಕಾರಣ ಎನ್ನಲಾಗಿದೆ.

ಭಾನುವಾರ ರಾತ್ರಿವೇಳೆ ಕುಶಾಲನಗರ ಮಾರುಕಟ್ಟೆ ರಸ್ತೆಯಲ್ಲಿ ಈ ಕೃತ್ಯ ನಡೆದಿದೆ, ಕೊಪ್ಪ ಕಡೆಯಿಂದ ಕ್ಯಾಮೆರಾದಲ್ಲಿ ದಾಖಲಾಗಿದೆ. ಅಪಘಾತ ಮಾಡಿದ ಕಾರನ್ನು ತೆಗೆಯಲು ಸಾದ್ಯವಾಗದೇ ಕಾರನ್ನು ಬಿಟ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಮೂವರು ದುಷ್ಕರ್ಮಿಗಳು ಇದ್ದ ಬಗ್ಗೆ ಮಾಹಿತಿ ದೊರೆತಿದ್ದು, ಅದರಲ್ಲಿ ಮುಳ್ಳು ್ಳಸೋಗೆಯ ಕಿರಣ್ ಎಂಬಾತ ಉದ್ದೇಶ ಪೂರ್ವಕವಾಗಿ ಅಪಘಾತ ನಡೆಸಿರುವ ಬಗ್ಗೆ ಪೊಲೀಸರಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಾರು ಕುಶಾಲನಗರದ

(ಮೊದಲ ಪುಟದಿಂದ) ಚಂದ್ರಕುಮಾರ್ ಎಂಬವರಿಗೆ ಸೇರಿದ್ದು ಕಳೆದ ಎರಡು ದಿನಗಳ ಹಿಂದೆ ತನ್ನಿಂದ ತುರ್ತು ಕೆಲಸಕ್ಕೆ ಹೋಗುವುದಾಗಿ ಕಿರಣ್ ಹೇಳಿ ಕಾರನ್ನು ಪಡೆದಿರುವುದಾಗಿ ಚಂದ್ರಕುಮಾರ್ ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ್‌ಗೆ ಮಾರಣಾಂತಿಕ ಹಲ್ಲೆ ಆಗಿದ್ದು ಆತನ ಸ್ನೇಹಿತ ಚೇತನ್‌ಗೆ ಅಲ್ಪ ಸ್ವಲ್ಪ ಗಾಯಗಳಾಗಿದೆ ಎಂದು ಸಾಗರ್ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಸಾಗರ್ ಈ ಘಟನೆಯ ಆರೋಪಿ ಕಿರಣ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಶೈಲೇಂದ್ರ ಕುಮಾರ್, ವೃತ್ತ ನಿರೀಕ್ಷಕ ಮಹೇಶ್, ಠಾಣಾಧಿಕಾರಿ ಚಂದ್ರಶೇಖರ್ ಭೇಟಿ ನೀಡಿ ಮಹಜರು ನಡೆಸಿದರು. ಸಾಗರ್ ತಾಯಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಮೊಕ್ಕದ್ದಮೆ ದಾಖಲಾಗಿದೆ.