ಕುಶಾಲನಗರ, ಆ. ೨: ಬೋಯಿಕೇರಿಯಲ್ಲಿ ನಡೆದ ಅಪಘಾತ ಪ್ರಕರಣ ವನ್ನು ಬಿಜೆಪಿ ಮತ್ತು ಅದರ ಸಂಘಟನೆಗಳು ರಾಜಕಾರಣಗೊಳಿಸುತ್ತಿರುವುದು ಸರಿಯಲ್ಲ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್ಕುಮಾರ್ ಹೇಳಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು ಅವುಗಳ ಪರಿಹಾರಕ್ಕೆ ನಿರ್ಲಕ್ಷ್ಯ ತಾಳಿರುವ ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದಿಟ್ಟುಕೊAಡು ಯೋಧರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ಸಂದರ್ಭ ಮಡಿಕೇರಿಯಲ್ಲಿ ೨ ಗÀಂಟೆಗಳ ಕಾಲ ರಸ್ತೆ ತಡೆ ಮಾಡಿರುವುದನ್ನು ಅವರು ಖಂಡಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ವಕ್ತಾರ ಸುರೇಶ್ ಸೈನಿಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ ಗೌರವವಿದೆ. ಬಿಜೆಪಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ನಿಟ್ಟಿನಲ್ಲಿ ಜನರ ಭಾವನೆಗಳನ್ನು ಕೆರಳಿಸುತ್ತಿದೆ ಎಂದರು. ಈ ಸಂದರ್ಭ ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜನಾರ್ಧನ್ ಇದ್ದರು.