ಕೂಡಿಗೆ, ಆ. ೧: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದ ಕ್ರೀಡಾ ಹಾಸ್ಟೆಲ್ ಮತ್ತು ಕ್ರೀಡಾ ಶಾಲೆಗಳಿಗೆ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪ್ರಕ್ರಿಯೆಯು ಕೂಡಿಗೆ ಕ್ರೀಡಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿದೆ.

ರಾಜ್ಯದ ೩೨ ಕ್ರೀಡಾ ಹಾಸ್ಟೆಲ್ ಗಳಿಗೆ ಮತ್ತು ಪದವಿಪೂರ್ವ ತರಗತಿಗೆ ಸೇರಲು ಆಯಾ ವಿದ್ಯಾರ್ಥಿಗಳ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಇದಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ವಿದ್ಯಾರ್ಥಿಯ ಎಲ್ಲಾ ದಾಖಲೆಗಳ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆ ವಿವಿಧ ಹಂತದಲ್ಲಿ ನಡೆಯುತ್ತಿದೆ ಎಂದು ರಾಜ್ಯಮಟ್ಟದ ಶಿಬಿರಾಧಿಕಾರಿ ಡಾ. ವಸಂತ್‌ಕುಮಾರ್ ತಿಳಿಸಿದ್ದಾರೆ.

ಹಿರಿಯರ ವಿಭಾಗದ ಬಾಲಕ ಬಾಲಕಿಯರು ಆಯಾ ಕ್ರೀಡೆಗೆ ಈಗಾಗಲೇ ಜಿಲ್ಲೆಯ ಮತ್ತು ವಿಭಾಗದ ಮಟ್ಟದಲ್ಲಿ ಭಾಗವಹಿಸಿ ನಂತರ ಅಂತಿಮ ಮಟ್ಟದ ಆಯ್ಕೆಗೆ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ದ್ದಾರೆ. ಅಲ್ಲದೆ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ವಿವಿಧ ಕ್ರೀಡೆಗೆ ಸಂಬAಧಿಸಿದ ೪೪ ಕ್ರೀಡಾ ತರಬೇತಿದಾರರು ಭಾಗವಹಿಸ ಲಿದ್ದಾರೆ.

ರಾಜ್ಯಮಟ್ಟದ ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ವಾಲಿಬಾಲ್, ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಜೂಡೊ, ಕುಸ್ತಿ ಸೇರಿದಂತೆ ಎಂಟು ಕ್ರೀಡೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ಶಿಬಿರಾಧಿಕಾರಿ ಡಾ. ವಸಂತ್‌ಕುಮಾರ್ ತಿಳಿಸಿದ್ದಾರೆ. ಈ ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆಯ್ಕೆಯ ನಂತರ ಅವರುಗಳು ಬಯಸಿದ ಕ್ರೀಡಾ ಹಾಸ್ಟೆಲ್‌ಗಳಿಗೆ ಆಯ್ಕೆಯಾಗುತ್ತಾರೆ ಎಂದು ತಿಳಿಸಿದ್ದಾರೆ.