ಸೋಮವಾರಪೇಟೆ, ಆ. ೩: ತಾಲೂಕಿನ ಅರಣ್ಯ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಂ.ಆರ್. ಚಂದ್ರನ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಎಂ.ಸಿ. ಮಂಜುನಾಥ್ ಅವರು ಸನ್ಮಾನಿಸಿದರು. ಈ ಸಂದರ್ಭ ಸರ್ಕಾರಿ ವಾಹನ ಚಾಲಕರುಗಳಾದ ಗೋಪಾಲ್, ಪಾಪು ಮತ್ತು ಜಗದೀಶ್ ಉಪಸ್ಥಿತರಿದ್ದರು.